2 Samuel 8:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ, ದಾವೀದನು ಫಿಲಿಷ್ಟಿಯರನ್ನು ಸೋಲಿಸಿ ಬಹುವಿಸ್ತಾರವಾದ ಪ್ರದೇಶವನ್ನು ಹತೋಟಿಯಲ್ಲಿಟ್ಟುಕೊಂಡಿದ್ದ ಅವರ ರಾಜಧಾನಿಯನ್ನು ಸ್ವಾಧೀನಪಡಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಮುತ್ತಿಗೆ ಹಾಕಿ, ಅವರನ್ನು ಸೋಲಿಸಿ, ಅವರ ರಾಜಧಾನಿಯನ್ನು ವಶಪಡಿಸಿಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.
Kannada BSI Bible 2016
ಇದಾದ ಮೇಲೆ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ಅಣಗಿಸಿ ಅವರ ಕೈಯಿಂದ ಮೇತೆಗಮ್ಮವನ್ನು ತಕ್ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಬಿದ್ದು ಅವರನ್ನು ಸೋಲಿಸಿ ಅವರ ರಾಜಧಾನಿಯನ್ನು ತೆಗೆದುಕೊಂಡು ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.
Kannada Bible (KNCL) BSI 2016
ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ, ಅವರನ್ನು ಸೋಲಿಸಿದನು. ಅವರ ರಾಜಧಾನಿಯನ್ನು ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರ ತರುವಾಯ ದಾವೀದನು ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿ, ಅವರಿಂದ ಮೇತೆಗ್ ಅಮ್ಮಹವನ್ನು ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.