2 Samuel 8:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ತೋವಿಯು ತನ್ನ ಮಗನಾದ ಯೋರಾವುನನ್ನು ರಾಜನಾದ ದಾವೀದನ ಬಳಿಗೆ ಕಳುಹಿಸಿದನು. ದಾವೀದನು ಹದದೆಜೆರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಯೋರಾವುನು ದಾವೀದನನ್ನು ಅಭಿನಂದಿಸಿದನು ಮತ್ತು ಆಶೀರ್ವದಿಸಿದನು. (ಈ ಮೊದಲು ಹದದೆಜೆರನು ತೋವಿಗೆ ವಿರುದ್ಧವಾಗಿ ಯುದ್ಧವನ್ನು ಮಾಡಿದನು.) ಯೋರಾವುನು ಚಿನ್ನ, ಬೆಳ್ಳಿ ಮತ್ತು ಹಿತ್ತಾಳೆಯಿಂದ ಮಾಡಿದ ವಸ್ತುಗಳನ್ನು ತಂದಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೋವಿಗೂ ಹದದೆಜೆರನಿಗೂ ವಿರೋಧವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ, ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ವಂದಿಸುವುದಕ್ಕೂ ಹರಸುವುದಕ್ಕೂ ತನ್ನ ಮಗನಾದ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ತಾಮ್ರ, ಬೆಳ್ಳಿ, ಬಂಗಾರದ ಪಾತ್ರೆಗಳನ್ನು ತಂದನು.
Kannada BSI Bible 2016
ಅವನು ದಾವೀದನನ್ನು ವಂದಿಸುವ ದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮ ನನ್ನು ಕಳುಹಿಸಿದನು; ಯಾಕಂದರೆ ತೋವಿಗೂ ಹದ ದೆಜೆರನಿಗೂ ವಿರೋಧವಾಗಿ ಯುದ್ಧಮಾಡಿದಾಗ ದಾವೀದನು ಅವನನ್ನು ಹೊಡೆದಿದ್ದನು; ಹದದೆಜೆರನಿಗೆ ತೋವು ಸಂಗಡ ಯುದ್ಧಗಳಿದ್ದವು. ಯೋರಾಮನು ಬೆಳ್ಳಿ ಬಂಗಾರ ಹಿತ್ತಾಳೆಯ ಪಾತ್ರೆಗಳನ್ನೂ ತನ್ನೊಂದಿಗೆ ತಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
(ತೋವಿಗೂ ಹದದೆಜೆರನಿಗೂ ವಿರೋಧವಿತ್ತು.) ದಾವೀದನು ಹದದೆಜೆರನ ಮೇಲೆ ಬಿದ್ದು ಅವನನ್ನು ಸೋಲಿಸಿದದರಿಂದ ತೋವು ದಾವೀದನನ್ನು ವಂದಿಸುವದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ತಾಮ್ರ ಬೆಳ್ಳಿ ಬಂಗಾರದ ಪಾತ್ರೆಗಳನ್ನು ತಂದನು.
Kannada Bible (KNCL) BSI 2016
ತೋವಿಗೂ ಹದದೆಜೆರನಿಗೂ ಹಗೆತನವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ ಅವನನ್ನು ಸೋಲಿಸಿದುದರಿಂದ ತೋವು ದಾವೀದನನ್ನು ಅಭಿನಂದಿಸುವುದಕ್ಕಾಗಿ ಹಾಗು ಹರಸುವುದಕ್ಕಾಗಿ ತನ್ನ ಮಗ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೆ ತಾಮ್ರ, ಬೆಳ್ಳಿ ಹಾಗು ಬಂಗಾರದ ಪಾತ್ರೆಗಳನ್ನು ತಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅರಸನಾದ ದಾವೀದನ ಕ್ಷೇಮಸಮಾಚಾರವನ್ನು ವಿಚಾರಿಸಲೂ, ಹದದೆಜೆರನ ವಿರುದ್ಧ ಯುದ್ಧಮಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಅವನನ್ನು ಅಭಿನಂದಿಸಿ, ಹರಸುವಂತೆ, ತೋವು ತನ್ನ ಪುತ್ರನಾದ ಯೋರಾಮನನ್ನು ಬೆಳ್ಳಿ, ಬಂಗಾರ, ಕಂಚಿನ ಪಾತ್ರೆಗಳ ಸಹಿತವಾಗಿ ದಾವೀದನ ಬಳಿಗೆ ಕಳುಹಿಸಿದನು; ಏಕೆಂದರೆ ಹದದೆಜೆರನಿಗೆ ತೋವಿಯ ಸಂಗಡ ಯುದ್ಧಗಳಿದ್ದವು.