2 Samuel 8:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಎದೋಮಿನ ಎಲ್ಲಾ ಕಡೆಯಲ್ಲೂ ಕಾವಲುದಂಡನ್ನು ಇರಿಸಿದನು. ಎದೋಮಿನ ಜನರೆಲ್ಲರೂ ದಾವೀದನ ಸೇವಕರಾದರು. ದಾವೀದನು ಹೋದ ಕಡೆಗಳಲ್ಲೆಲ್ಲಾ ಯೆಹೋವನು ಜಯವನ್ನು ಉಂಟುಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಎದೋಮಿನಲ್ಲೆಲ್ಲಾ ಕಾವಲುದಂಡನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.
Kannada BSI Bible 2016
ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಎದೋವಿುನಲ್ಲೆಲ್ಲಾ ಕಾವಲುದಂಡುಗಳನ್ನಿರಿಸಿದನು; ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.
Kannada Bible (KNCL) BSI 2016
ಎದೋಮಿನಲ್ಲೆಲ್ಲಾ ಅವನು ಕಾವಲು ದಂಡುಗಳನ್ನಿರಿಸಿದನು. ಹೀಗೆ ಎದೋಮ್ಯರೆಲ್ಲರೂ ದಾವೀದನ ಅಡಿಯಾಳುಗಳಾದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿಹೋದರೂ ಜಯ ಉಂಟಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಸ್ತ ಎದೋಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಇದರಿಂದ, ಎದೋಮ್ಯರೆಲ್ಲರು ದಾವೀದನಿಗೆ ಅಧೀನರಾದರು. ದಾವೀದನು ಹೋದಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.