2 Samuel 8:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋವಾಬಿನ ಜನರನ್ನು ಸಹ ದಾವೀದನು ಸೋಲಿಸಿದನು. ಅವರನ್ನು ನೆಲದ ಮೇಲೆ ಬಲವಂತದಿಂದ ಮಲಗಿಸಿ ಹಗ್ಗದಿಂದ ಅವರನ್ನು ಸಾಲುಸಾಲಾಗಿ ವಿಂಗಡಿಸಿದನು. ಎರಡು ಸಾಲಿನ ಗಂಡಸರನ್ನು ಕೊಲ್ಲಿಸಿದನು; ಆದರೆ ಮೂರನೆಯ ಸಾಲಿನ ಗಂಡಸರನ್ನು ಜೀವಂತವಾಗಿ ಉಳಿಸಿದನು. ಮೋವಾಬಿನ ಜನರು ದಾವೀದನ ಸೇವಕರಾದರು. ಅವರು ಅವನಿಗೆ ಕಪ್ಪಕಾಣಿಕೆಗಳನ್ನು ಅರ್ಪಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ, ಅವರನ್ನು ನೆಲಕ್ಕೆ ಉರುಳಿಸಿ, ಹಗ್ಗದಿಂದ ಅಳತೆಮಾಡಿಸಿ, ಪ್ರತಿ ಮೂರನೆಯ ಎರಡು ಭಾಗದ ಜನರನ್ನು ಕೊಲ್ಲಿಸಿ, ಮೂರನೆ ಭಾಗದ ಜನರನ್ನು ಉಳಿಸಿದನು. ಉಳಿದ ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.
Kannada BSI Bible 2016
ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ ಅವರನ್ನು ನೆಲಕ್ಕೆ ಹಾಕಿಸಿ ಹಗ್ಗದಿಂದ ಅಳತೆ ಮಾಡಿಸಿ ಎರಡು ಪಾಲು ಜನರನ್ನು ಕೊಲ್ಲಿಸಿ ಒಂದು ಪಾಲು ಉಳಿಸಿದನು. ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.
Kannada Bible (KNCL) BSI 2016
ಆಮೇಲೆ ಮೋವಾಬ್ಯರನ್ನು ಸೋಲಿಸಿದನು. ಸೆರೆಯಾಳುಗಳನ್ನು ನೆಲದಮೇಲೆ ಮಲಗಿಸಿ ಹಗ್ಗದಿಂದ ಅಳತೆಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ ಒಂದು ಪಾಲನ್ನು ಉಳಿಸಿದನು. ಮೋವಾಬ್ಯರು ದಾವೀದನಿಗೆ ಅಧೀನರಾಗಿ ಅವನಿಗೆ ಕಪ್ಪಕೊಡಬೇಕಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ದಾವೀದನು ಮೋವಾಬ್ಯರನ್ನು ಸಹ ಸೋಲಿಸಿದನು. ಸೆರೆಯಾಳುಗಳನ್ನು ನೆಲದ ಮೇಲೆ ಹಗ್ಗದಿಂದ ಅಳತೆ ಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ, ಒಂದು ಪಾಲನ್ನು ಉಳಿಸಿದನು. ಹೀಗೆ ಮೋವಾಬ್ಯರು ದಾವೀದನಿಗೆ ಅಧೀನರಾಗಿ ಕಪ್ಪಕೊಡುವವರಾದರು.