2 Samuel 8:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹದದೆಜೆರನು ರೆಹೋಬನ ಮಗ ಹಾಗೂ ಚೋಬದ ರಾಜ. ದಾವೀದನು ಯೂಫ್ರೇಟೀಸ್ ನದಿಯ ಸುತ್ತಲಿನ ಪ್ರದೇಶವನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ, ಹದದೆಜೆರನನ್ನು ಸೋಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ಸೋಲಿಸಿದನು.
Kannada BSI Bible 2016
ಇದಲ್ಲದೆ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನು ತನ್ನ ಮೇರೆಯನ್ನು ಕಟ್ಟಿ ಕೊಳ್ಳುವದಕ್ಕೆ ಹೋದಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಯೂಫ್ರೇಟೀಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ಸೋಲಿಸಿ
Kannada Bible (KNCL) BSI 2016
ಬಳಿಕ ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ದಾವೀದನು ಪರಾಭವಗೊಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿರುವಾಗ, ಚೋಬದ ಅರಸನಾದ ರೆಹೋಬನ ಮಗ ಹದದೆಜೆರನನ್ನು ಸೋಲಿಸಿದನು.