2 Samuel 8:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹದದೆಜೆರನಿಂದ ಒಂದು ಸಾವಿರ ರಥಗಳನ್ನೂ ಒಂದು ಸಾವಿರದ ಏಳುನೂರು ಅಶ್ವಪಡೆಗಳನ್ನೂ ದಾವೀದನು ತೆಗೆದುಕೊಂಡನು. ಅವನು ಇಪ್ಪತ್ತು ಸಾವಿರ ಕಾಲಾಳು ಸೈನಿಕರನ್ನು ಸಹ ಪಡೆದನು. ದಾವೀದನು ಒಂದು ನೂರು ರಥದ ಕುದುರೆಗಳನ್ನು ಇಟ್ಟುಕೊಂಡು ಉಳಿದವುಗಳನ್ನು ಕುಂಟುವಂತೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅವರ ಸಾವಿರದ ಏಳುನೂರು ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕಾದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿಬಿಟ್ಟನು.
Kannada BSI Bible 2016
ದಾವೀದನು ಯೂಫ್ರೇ ಟಿಸ್ ನದಿಯ ಬಳಿಯಲ್ಲಿ ಅವನಿಗಿದ್ದ ಸಾವಿರ ರಥ ಗಳನ್ನೂ ಏಳು ನೂರು ಕುದುರೆ ರಾಹುತರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಹಿಡಿದು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ದುಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಸಾವಿರದ ಏಳುನೂರು ಮಂದಿ ರಾಹುತರನ್ನೂ ಇಪ್ಪತ್ತುಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ನೂರು ಕುದುರೆಗಳನ್ನಿಟ್ಟುಕೊಂಡು ವಿುಕ್ಕಾದ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು.
Kannada Bible (KNCL) BSI 2016
ಸಾವಿರದ ಏಳುನೂರು ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು, ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಅವನಿಂದ ಸಾವಿರ ರಥಗಳನ್ನೂ, ಏಳು ಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ವಶಪಡಿಸಿಕೊಂಡನು. ನೂರು ರಥಗಳಿಗೆ ಕುದುರೆಗಳನ್ನು ಉಳಿಸಿ, ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ಯಿಸಿಬಿಟ್ಟನು.