2 Samuel 8:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚೋಬದ ರಾಜನಾದ ಹದದೆಜೆರನ ಸಹಾಯಕ್ಕೆ ದಮಸ್ಕದ ಅರಾಮ್ಯರು ಬಂದರು. ಆದರೆ ದಾವೀದನು ಆ ಇಪ್ಪತ್ತೆರಡು ಸಾವಿರ ಅರಾಮ್ಯರನ್ನು ಸಂಹರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಮಸ್ಕದ ಅರಾಮ್ಯರು, ಚೋಬದ ಅರಸನಾದ ಹದದೆಜೆರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.
Kannada BSI Bible 2016
ಆದರೆ ದಮಸ್ಕದಲ್ಲಿರುವ ಅರಾಮ್ಯರು ಚೋಬದ ಅರಸನಾದ ಹದದೆಜೆರನಿಗೆ ಸಹಾಯಮಾಡುವದಕ್ಕೆ ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದು ಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದದೆಜೆರನನ್ನು ರಕ್ಷಿಸಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಹತಿಸಿದನು.
Kannada Bible (KNCL) BSI 2016
ದಮಸ್ಕದ ಸಿರಿಯಾದವರು ಚೋಬದ ಅರಸನಾದ ಹದದೆಜೆರನಿಗೆ ನೆರವಾಗಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸದೆಬಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಮಸ್ಕದ ಅರಾಮ್ಯರು ಚೋಬದ ಅರಸ ಹದದೆಜೆರನಿಗೆ ಸಹಾಯಮಾಡಲು ಬಂದಾಗ, ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸಂಹರಿಸಿಬಿಟ್ಟನು.