2 Samuel 8:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ದಾವೀದನು ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಅರಾಮ್ಯರು ದಾವೀದನ ಸೇವಕರಾದರು ಮತ್ತು ಅವನಿಗೆ ಕಾಣಿಕೆಗಳನ್ನು ತಂದರು. ದಾವೀದನು ಹೋದ ಸ್ಥಳಗಳಲ್ಲೆಲ್ಲ ಯೆಹೋವನು ಜಯವನ್ನು ಉಂಟುಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ದಾವೀದನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.
Kannada BSI Bible 2016
ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.
Kannada Bible (KNCL) BSI 2016
ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಸಿರಿಯಾದವರು ಅವನಿಗೆ ಅಧೀನರಾಗಿ ಕಪ್ಪ ಕೊಡತೊಡಗಿದರು. ಸರ್ವೆಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯ ದೊರಕಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ದಾವೀದನು ದಮಸ್ಕದ ಅರಾಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಹೀಗೆ ಅರಾಮ್ಯರು ದಾವೀದನಿಗೆ ಅಧೀನರಾಗಿ, ಕಪ್ಪವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.