2 Samuel 9:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಮೆಫೀಬೋಶೆತನಿಗಾಗಿ ಭೂಮಿಯಲ್ಲಿ ವ್ಯವಸಾಯ ಮಾಡು. ನಿನ್ನ ಮಕ್ಕಳೂ ನಿನ್ನ ಸೇವಕರೂ ಮೆಫೀಬೋಶೆತನಿಗಾಗಿ ಇದನ್ನು ಮಾಡಲಿ. ನೀನು ಬೆಳೆಗಳನ್ನು ಕೊಯ್ದು ಸುಗ್ಗಿಮಾಡು. ಆಗ ನಿನ್ನ ಒಡೆಯನ ಮೊಮ್ಮಗನಿಗೆ ಬೇಕಾದಷ್ಟು ಆಹಾರವಿರುತ್ತದೆ. ಆದರೆ ನಿನ್ನ ಒಡೆಯನ ಮೊಮ್ಮಗನಾದ ಮೆಫೀಬೋಶೆತನು ಯಾವಾಗಲೂ ನನ್ನ ಪಂಕ್ತಿಯಲ್ಲಿ ಊಟ ಮಾಡಬೇಕು” ಎಂದನು. ಚೀಬನಿಗೆ ಹದಿನೈದು ಮಂದಿ ಗಂಡುಮಕ್ಕಳೂ, ಇಪ್ಪತ್ತು ಮಂದಿ ಸೇವಕರೂ ಇದ್ದರೂ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು, ನಿನ್ನ ಮಕ್ಕಳೂ ಮತ್ತು ನಿನ್ನ ದಾಸರು ನಿನ್ನ ಯಜಮಾನನ ಮೊಮ್ಮಗನ ಆಹಾರಕ್ಕಾಗಿ ಭೂಮಿಯನ್ನು ವ್ಯವಸಾಯ ಮಾಡಿ, ಅದರ ಬೆಳೆಯನ್ನು ಇವರ ಮನೆಯವರ ಅಶನಾರ್ಥವಾಗಿ (ಜೀವನಾಂಶಕ್ಕಾಗಿ) ತಂದು ಕೊಡಬೇಕು. ಆದರೆ ಮೆಫೀಬೋಶೆತ್ತಿಗಾದರೋ ನಿತ್ಯವೂ ನನ್ನ ಪಂಕ್ತಿಯಲ್ಲಿ ಭೋಜನವಾಗುವುದು” ಎಂದು ಹೇಳಿದನು. ಚೀಬನಿಗೆ ಹದಿನೈದು ಮಂದಿ ಗಂಡು ಮಕ್ಕಳೂ, ಇಪ್ಪತ್ತು ಮಂದಿ ಸೇವಕರು ಇದ್ದರು.
Kannada BSI Bible 2016
ಆದದರಿಂದ ನೀನೂ ನಿನ್ನ ಕುಮಾರರೂ ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮಗನಾದ ಮೆಫೀಬೋಶೆ ತನು ನಿತ್ಯವೂ ನನ್ನ ಮೇಜಿನಲ್ಲಿ ಊಟ ಮಾಡುವನು ಅಂದನು. ಈ ಚೀಬನಿಗೆ ಹದಿನೈದು ಮಂದಿ ಕುಮಾ ರರೂ ಇಪ್ಪತ್ತು ಮಂದಿ ದಾಸರೂ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನೂ ನಿನ್ನ ಮಕ್ಕಳೂ ದಾಸರೂ ನಿನ್ನ ಯಜಮಾನನ ಮೊಮ್ಮಗನಿಗೋಸ್ಕರ ಆ ಭೂವಿುಯನ್ನು ವ್ಯವಸಾಯ ಮಾಡಿ ಅದರ ಬೆಳೆಯನ್ನು ಇವನ ಮನೆಯವರ ಅಶನಾರ್ಥವಾಗಿ ತಂದುಕೊಡಬೇಕು. ಇವನಿಗಾದರೋ ನಿತ್ಯವೂ ನನ್ನ ಪಂಕ್ತಿಯಲ್ಲಿ ಭೋಜನವಾಗುವದು ಎಂದು ಹೇಳಿದನು. ಚೀಬನಿಗೆ ಹದಿನೈದು ಮಂದಿ ಗಂಡುಮಕ್ಕಳೂ ಇಪ್ಪತ್ತು ಮಂದಿ ಸೇವಕರೂ ಇದ್ದರು.
Kannada Bible (KNCL) BSI 2016
ನೀನೂ ನಿನ್ನ ಮಕ್ಕಳೂ ಆಳುಗಳೂ ನಿನ್ನ ಯಜಮಾನನ ಮೊಮ್ಮಗನಿಗಾಗಿ ಆ ಭೂಮಿಯನ್ನು ವ್ಯವಸಾಯಮಾಡಿ ಅದರ ಬೆಳೆಯನ್ನು ಇವನ ಮನೆಯವರ ಅಶನಾರ್ಥವಾಗಿ ತಂದುಕೊಡಬೇಕು. ಇವನಿಗಾದರೋ ನಿತ್ಯವೂ ನನ್ನ ಪಂಕ್ತಿಯಲ್ಲೇ ಭೋಜನವಾಗುವುದು,” ಎಂದು ಹೇಳಿದನು. ಚೀಬನಿಗೆ ಹದಿನೈದು ಮಂದಿ ಗಂಡು ಮಕ್ಕಳೂ ಇಪ್ಪತ್ತು ಮಂದಿ ಆಳುಗಳೂ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನೀನೂ, ನಿನ್ನ ಪುತ್ರರೂ, ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ, ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ, ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮೊಮ್ಮಗ ಮೆಫೀಬೋಶೆತನು ನಿತ್ಯವೂ ನನ್ನ ಮೇಜಿನಲ್ಲಿ ಊಟಮಾಡುವನು,” ಎಂದನು. ಈ ಚೀಬನಿಗೆ ಹದಿನೈದು ಮಂದಿ ಪುತ್ರರೂ ಇಪ್ಪತ್ತು ಮಂದಿ ದಾಸರೂ ಇದ್ದರು.