2 Samuel 9:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚೀಬನು ರಾಜನಾದ ದಾವೀದನಿಗೆ, “ನಾನು ನಿಮ್ಮ ಸೇವಕ. ರಾಜನಾದ ಒಡೆಯನು ನನಗೆ ಆಜ್ಞಾಪಿಸಿದ್ದೆಲ್ಲವನ್ನೂ ನಾನು ಮಾಡುತ್ತೇನೆ” ಎಂದನು. ಆದ್ದರಿಂದ ಮೆಫೀಬೋಶೆತನು, ರಾಜನ ಗಂಡುಮಕ್ಕಳಲ್ಲಿ ಒಬ್ಬನಂತೆ, ದಾವೀದನ ಪಂಕ್ತಿಯಲ್ಲಿ ಊಟ ಮಾಡುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೀಬನು ಅರಸನಿಗೆ, “ಒಡೆಯನಾದ ಅರಸನ ಅಪ್ಪಣೆಯಂತೆ ನಿನ್ನ ಸೇವಕನು ನಡೆಯುವನು” ಎಂದು ಉತ್ತರಕೊಟ್ಟನು. ಈ ಪ್ರಕಾರ ಮೆಫೀಬೋಶೆತನು ರಾಜಪುತ್ರರಂತೆ ಅರಸನ ಪಂಕ್ತಿಯಲ್ಲಿ ಊಟಮಾಡುವವನಾದನು.
Kannada BSI Bible 2016
ಆಗ ಚೀಬನು ಅರಸನಿಗೆ--ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು ಅಂದನು. ಅರಸನ ಕುಮಾರ ರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೀಬನು ಅರಸನಿಗೆ - ಒಡೆಯನಾದ ಅರಸನ ಅಪ್ಪಣೆಯಂತೆ ಸೇವಕನು ನಡೆಯುವನು ಎಂದು ಉತ್ತರಕೊಟ್ಟನು. ಈ ಪ್ರಕಾರ ಮೆಫೀಬೋಶೆತನು ರಾಜಪುತ್ರರಂತೆ ಅರಸನ ಪಂಕ್ತಿಯಲ್ಲಿ ಊಟಮಾಡುವವನಾದನು.
Kannada Bible (KNCL) BSI 2016
ಚೀಬನು ಅರಸನಿಗೆ, “ಒಡೆಯರಾದ ಅರಸರ ಅಪ್ಪಣೆ ಮೇರೆಗೆ ಸೇವಕನು ನಡೆಯುವನು,” ಎಂದು ಉತ್ತರಕೊಟ್ಟನು. ಈ ಪ್ರಕಾರ ಮೆಫೀಬೋಶೆತನು ರಾಜಪುತ್ರರಂತೆ ಅರಸನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಚೀಬನು ಅರಸನಿಗೆ, “ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು,” ಎಂದನು. ಅರಸನ ಪುತ್ರರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು.