2 Samuel 9:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ದಾವೀದನು, “ಸೌಲನ ಕುಟುಂಬದಲ್ಲಿ ಯಾವ ವ್ಯಕ್ತಿಯಾದರೂ ಉಳಿದಿರುವನೇ? ನಾನು ಆ ವ್ಯಕ್ತಿಗೆ ದೇವರ ಕರುಣೆಯನ್ನು ತೋರಿಸಬೇಕಾಗಿದೆ” ಎಂದು ಹೇಳಿದನು. ಚೀಬನು ರಾಜನಾದ ದಾವೀದನಿಗೆ, “ಯೋನಾತಾನನ ಮಗನೊಬ್ಬನು ಇನ್ನೂ ಇದ್ದಾನೆ. ಅವನ ಎರಡೂ ಕಾಲುಗಳು ಕುಂಟಾಗಿವೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಅವನಿಗೆ, “ಸೌಲನ ಕುಟುಂಬದಲ್ಲಿ ಯಾರಾದರೂ ಉಳಿದಿದ್ದರೆ ಹೇಳು, ನಾನು ದೇವರನ್ನು ನೆನಸಿ ಅವರಿಗೆ ದಯೆತೋರಿಸುತ್ತೇನೆ” ಎಂದನು. ಆಗ ಚೀಬನು ಅರಸನಿಗೆ “ಯೋನಾತಾನನಿಗೆ ಎರಡೂ ಕಾಲು ಕುಂಟಾದ ಒಬ್ಬ ಮಗನಿದ್ದಾನೆ” ಎಂದು ಹೇಳಿದನು.
Kannada BSI Bible 2016
ಅರಸನು ಅವನಿಗೆ--ನಾನು ಅವನಿಗೆ ದೇವರ ದಯೆತೋರಿಸುವ ಹಾಗೆ ಸೌಲನ ಮನೆಯವರಲ್ಲಿ ಇನ್ನೂ ಯಾವನಾ ದರೂ ಇದ್ದಾನೋ ಅಂದನು. ಆಗ ಚೀಬನು ಅರಸ ನಿಗೆ--ಯೋನಾತಾನನಿಗೆ ಎರಡು ಕಾಲುಕುಂಟಾದ ಒಬ್ಬ ಮಗನಿದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ಅವನಿಗೆ - ಸೌಲನ ಕುಟುಂಬದವರಲ್ಲಿ ಯಾರಾದರೂ ಉಳಿದಿದ್ದರೆ ಹೇಳು; ನಾನು ದೇವರನ್ನು ನೆನಸಿ ಅವರಿಗೆ ದಯೆತೋರಿಸುತ್ತೇನೆ ಅಂದನು. ಆಗ ಚೀಬನು ಅರಸನಿಗೆ - ಯೋನಾತಾನನಿಗೆ ಎರಡು ಕಾಲೂ ಕುಂಟಾದ ಒಬ್ಬ ಮಗನಿರುತ್ತಾನೆ ಎಂದು ಹೇಳಿದನು.
Kannada Bible (KNCL) BSI 2016
ಆಗ ಅರಸನು, “ಸೌಲನ ಕುಟುಂಬದವರಲ್ಲಿ ಯಾರಾದರೂ ಉಳಿದಿದ್ದರೆ ಹೇಳು; ನಾನು ದೇವರನ್ನು ನೆನಸಿ ಅವರಿಗೆ ದಯೆ ತೋರಿಸುತ್ತೇನೆ,” ಎಂದನು. ಆಗ ಚೀಬನು, “ಯೋನಾತಾನನಿಗೆ, ಎರಡು ಕಾಲೂ ಕುಂಟಾದ ಒಬ್ಬ ಮಗನಿರುತ್ತಾನೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು, “ನಾನು ದೇವರ ದಯೆ ತೋರಿಸುವ ಹಾಗೆ ಸೌಲನ ಕುಟುಂಬದಲ್ಲಿ ಇನ್ನೂ ಯಾವನಾದರೂ ಇದ್ದಾನೋ?” ಎಂದನು. ಆಗ ಚೀಬನು ಅರಸನಿಗೆ, “ಯೋನಾತಾನನಿಗೆ ಎರಡೂ ಕಾಲು ಕುಂಟಾದ ಮಗನಿದ್ದಾನೆ,” ಎಂದನು.