2 Samuel 9:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ದಾವೀದನು ಚೀಬನಿಗೆ, “ಅವನು ಎಲ್ಲಿದ್ದಾನೆ?” ಎಂದು ಕೇಳಿದನು. ಚೀಬನು ರಾಜನಿಗೆ, “ಅವನು ಲೋದೆಬಾರಿನಲ್ಲಿರುವ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಲ್ಲಿದ್ದಾನೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು, “ಅವನು ಎಲ್ಲಿರುತ್ತಾನೆ?” ಎಂದು ಅವನನ್ನು ಕೇಳಲು ಚೀಬನು, “ಲೋದೆಬಾರಿನಲ್ಲಿರುವ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಲ್ಲಿರುತ್ತಾನೆ” ಎಂದು ಉತ್ತರಕೊಟ್ಟನು.
Kannada BSI Bible 2016
ಅವನು ಎಲ್ಲಿ ಇದ್ದಾ ನೆಂದು ಅರಸನು ಅವನನ್ನು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಲ್ಲಿ ಇದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು - ಎಲ್ಲಿರುತ್ತಾನೆ ಎಂದು ಅವನನ್ನು ಕೇಳಲು ಅವನು - ಲೋದೆಬಾರಿನಲ್ಲಿರುವ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಲ್ಲಿರುತ್ತಾನೆ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಅರಸನು, “ಎಲ್ಲಿದ್ದಾನೆ?” ಎಂದು ಕೇಳಲು ಅವನು, “ಲೋದೆಬಾರಿನಲ್ಲಿರುವ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಲ್ಲಿರುತ್ತಾನೆ,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವನು ಎಲ್ಲಿ ಇದ್ದಾನೆ?” ಎಂದು ಅರಸನು ಅವನನ್ನು ಕೇಳಿದನು. ಚೀಬನು ಅರಸನಿಗೆ, “ಅವನು ಲೋದೆಬಾರಲ್ಲಿ ಅಮ್ಮಿಯೇಲನ ಮಗ ಮಾಕೀರನ ಮನೆಯಲ್ಲಿ ಇದ್ದಾನೆ,” ಎಂದನು.