2 Samuel 9:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ದಾವೀದನು, “ಮೆಫೀಬೋಶೆತನೇ” ಎಂದನು. ಮೆಫೀಬೋಶೆತನು, “ನಿಮ್ಮ ಸೇವಕನಾದ ನಾನು ಇಲ್ಲಿದ್ದೇನೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನ ಮೊಮ್ಮಗನೂ, ಯೋನಾತಾನನ ಮಗನೂ ಆದ ಮೆಫೀಬೋಶೆತನು ಬಂದಾಗ ದಾವೀದನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ದಾವೀದನು ಮೆಫೀಬೋಶೆತನೇ ಅನ್ನಲು ಅವನು, “ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ” ಎಂದನು.
Kannada BSI Bible 2016
ಸೌಲನ ಮಗನಾಗಿರುವ ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನು ಬಂದಾಗ ದಾವೀದನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ದಾವೀದನು - ಮೆಫೀಬೋಶೆತನೇ ಅನ್ನಲು ಅವನು - ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ ಎಂದನು.
Kannada Bible (KNCL) BSI 2016
ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಆ ಮೆಫೀಬೋಶೆತನು ಬಂದು ದಾವೀದನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ದಾವೀದನು, “ಮೆಫೀಬೋಶೆತನೇ,” ಎಂದೊಡನೆ ಅವನು, “ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನ ಮಗನಾಗಿರುವ ಯೋನಾತಾನನ ಮಗ ಮೆಫೀಬೋಶೆತನು ದಾವೀದನ ಬಳಿಗೆ ಬಂದಾಗ, ಮೋರೆ ಕೆಳಗಾಗಿ ಬಿದ್ದು ವಂದಿಸಿದನು. ದಾವೀದನು, “ಮೆಫೀಬೋಶೆತನೇ,” ಎಂದನು. ಅವನು, “ಇಗೋ, ನಿನ್ನ ದಾಸನು,” ಎಂದನು.