2 Samuel 9:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೆಫೀಬೋಶೆತನು ದಾವೀದನಿಗೆ ಮತ್ತೆ ಸಾಷ್ಟಾಂಗನಮಸ್ಕಾರ ಮಾಡಿ, “ನೀನು ನಿನ್ನ ಸೇವಕನಾದ ನನಗೆ ಬಹಳ ದಯಾಪರನಾಗಿರುವೆ, ನಾನು ಸತ್ತ ನಾಯಿಗಿಂತ ಉತ್ತಮನೇನಲ್ಲ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೆಫೀಬೋಶೆತನು ಇದನ್ನು ಕೇಳಿ ಅರಸನಿಗೆ ಸಾಷ್ಟಾಂಗನಮಸ್ಕಾರಮಾಡಿ, “ಸತ್ತ ನಾಯಿಯಂತಿರುವ ನನ್ನನ್ನು ನೀನು ಕಟಾಕ್ಷಿಸಲು ನಿನ್ನ ದಾಸನಾದ ನಾನು ಎಷ್ಟರವನು?” ಎಂದು ಹೇಳಿದನು.
Kannada BSI Bible 2016
ಆಗ ಅವನು ಅಡ್ಡಬಿದ್ದು--ನೀನು ನನ್ನಂಥ ಸತ್ತನಾಯಿಯನ್ನು ದೃಷ್ಟಿಸುವ ಹಾಗೆ ನಿನ್ನ ದಾಸನು ಎಷ್ಟರವನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೆಫೀಬೋಶೆತನು ಇದನ್ನು ಕೇಳಿ ಅರಸನಿಗೆ ಸಾಷ್ಟಾಂಗನಮಸ್ಕಾರ ಮಾಡಿ - ನೀನು ಸತ್ತ ನಾಯಿಯಂತಿರುವ ನನ್ನನ್ನು ಲಕ್ಷಿಸುವ ಹಾಗೆ ನಿನ್ನ ದಾಸನಾದ ನಾನು ಎಷ್ಟರವನು ಅಂದನು.
Kannada Bible (KNCL) BSI 2016
ಮೆಫೀಬೋಶೆತನು ಇದನ್ನು ಕೇಳಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ, “ಸತ್ತ ನಾಯಿಯಂತಿರುವ ನನ್ನನ್ನು ತಾವು ಗಮನಿಸಲು ನಿಮ್ಮ ಗುಲಾಮನಾದ ನಾನು ಅಪಾತ್ರನೇ!” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು ಅಡ್ಡಬಿದ್ದು, “ನೀನು ನನ್ನಂಥ ಸತ್ತ ನಾಯಿಯನ್ನು ದೃಷ್ಟಿಸುವ ಹಾಗೆ ನಿನ್ನ ದಾಸನು ಎಷ್ಟರವನು,” ಎಂದನು.