2 Thessalonians 1:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದಕಾರಣವೇ ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತೇವೆ. ಯಾವ ಒಳ್ಳೆಯ ಮಾರ್ಗದಲ್ಲಿ ನೀವು ಜೀವಿಸಬೇಕೆಂದು ದೇವರು ನಿಮ್ಮನ್ನು ಕರೆದನೋ, ಆ ಮಾರ್ಗದಲ್ಲೇ ನೀವು ಜೀವಿಸಲಿಕ್ಕಾಗುವಂತೆ ಪ್ರಾರ್ಥಿಸುತ್ತೇವೆ. ನಿಮ್ಮಲ್ಲಿರುವ ಒಳ್ಳೆಯ ತನವು ಒಳ್ಳೆಯದನ್ನು ಮಾಡುವಂತೆ ನಿಮ್ಮನ್ನು ಪ್ರೇರೇಪಿಸುತ್ತದೆ. ನಿಮ್ಮಲ್ಲಿರುವ ನಂಬಿಕೆಯು ನಿಮ್ಮಿಂದ ಕಾರ್ಯ ಸಾಧಿಸುತ್ತದೆ. ಈ ಕಾರ್ಯಗಳನ್ನು ನೀವು ಹೆಚ್ಚುಹೆಚ್ಚಾಗಿ ಮಾಡಲು ದೇವರು ತನ್ನ ಶಕ್ತಿಯಿಂದ ನಿಮಗೆ ಸಹಾಯ ಮಾಡಲೆಂದು ಬೇಡಿಕೊಳ್ಳುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಮಾಡಿ, ನಮ್ಮ ದೇವರು ನಿಮ್ಮನ್ನು ಕರೆದದ್ದಕ್ಕೆ ತಾನೇ ನಿಮ್ಮನ್ನು ಯೋಗ್ಯರೆಂದು ಎಣಿಸಬೇಕೆಂತಲೂ, ಸತ್ಕ್ರಿಯೆಗಳಿಗಾಗಿರುವ ನಿಮ್ಮ ಸಕಲ ಆಸೆಗಳನ್ನೂ, ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಶಕ್ತಿಪೂರ್ವಕವಾಗಿ ಈಡೇರಿಸಬೇಕೆಂತಲೂ ಬೇಡಿಕೊಳ್ಳುತ್ತೇವೆ.
Kannada BSI Bible 2016
ಹೀಗಿರುವದರಿಂದ ನಾವು ಯಾವಾ ಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡಿ ಈ ಕರೆಯು ವಿಕೆಗೆ ದೇವರು ನಿಮ್ಮನ್ನು ಯೊಗ್ಯರೆಂದು ಎಣಿಸು ವಂತೆಯೂ ತನ್ನ ಒಳ್ಳೇತನದ ಒಳ್ಳೇ ಸಂತೋಷವನ್ನು ಮತ್ತು ಬಲದಿಂದಾದ ನಂಬಿಕೆಯ ಕಾರ್ಯವನ್ನು ಪೂರೈಸುವ ಹಾಗೆಯೂ ಬೇಡಿಕೊಳ್ಳುತ್ತೇವೆ.ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನವನ್ನು ನಾವು ಎದುರುನೋಡುತ್ತಾ ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಮಾಡಿ - ನಮ್ಮ ದೇವರು ನಿಮ್ಮನ್ನು ಕರೆದದ್ದಕ್ಕೆ ತಾನೇ ನಿಮ್ಮನ್ನು ಯೋಗ್ಯರೆಂದು ಎಣಿಸಬೇಕೆಂತಲೂ ಸತ್ಕ್ರಿಯೆಗಳಲ್ಲಿ ಸಂತೋಷಿಸುವ ನಿಮ್ಮ ಸಕಲ ಆಲೋಚನೆಯನ್ನೂ ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಶಕ್ತಿಪೂರ್ವಕವಾಗಿ ಸಿದ್ಧಿಗೆ ತರಬೇಕೆಂತಲೂ ಬೇಡಿಕೊಳ್ಳುತ್ತೇವೆ.
Kannada Bible (KNCL) BSI 2016
ಇದಕ್ಕಾಗಿ ನಿಮಗೋಸ್ಕರ ನಾವು ಸದಾ ಪ್ರಾರ್ಥಿಸುತ್ತೇವೆ. ದೇವರೇ ನೀಡಿರುವ ಕರೆಗೆ ನೀವು ಯೋಗ್ಯರಾಗಿ ಬಾಳುವಂತಾಗಲಿ; ದೇವರ ಮಹಿಮಾಶಕ್ತಿಯಿಂದ ನಿಮ್ಮ ಶುಭಾಕಾಂಕ್ಷೆಗಳು ಮತ್ತು ವಿಶ್ವಾಸಪ್ರೇರಿತ ಕಾರ್ಯಗಳು ಪೂರ್ಣವಾಗಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ದೇವರು ನೀಡಿರುವ ಕರೆಯುವಿಕೆಗೆ ನಿಮ್ಮನ್ನು ಯೋಗ್ಯರೆಂದು ಎಣಿಸಿ, ಒಳಿತನ್ನು ಮಾಡಲು ನಿಮ್ಮ ಎಲ್ಲಾ ಇಷ್ಟಾರ್ಥವನ್ನೂ ವಿಶ್ವಾಸದಿಂದ ಆಗಿರುವ ನಿಮ್ಮ ಎಲ್ಲಾ ಕಾರ್ಯಗಳನ್ನೂ ದೇವರು ತಮ್ಮ ಶಕ್ತಿಯಿಂದ ಪರಿಪೂರ್ಣಗೊಳಿಸುವಂತೆ ನಾವು ಯಾವಾಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡುತ್ತೇವೆ.