2 Thessalonians 1:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದಲೆಂದು ಮತ್ತು ನೀವೂ ಆತನಲ್ಲಿ ಮಹಿಮೆ ಹೊಂದಲೆಂದು ನಾವು ಪ್ರಾರ್ಥಿಸುತ್ತೇವೆ. ಆ ಮಹಿಮೆಯು ನಮ್ಮ ದೇವರ ಮತ್ತು ಪ್ರಭು ಯೇಸು ಕ್ರಿಸ್ತನ ಕೃಪೆಯಿಂದ ಬರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ನಮ್ಮ ದೇವರು ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗೆ ಅನುಸಾರವಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವುದು ನೀವೂ ಆತನಲ್ಲಿ ಮಹಿಮೆ ಹೊಂದುವಿರಿ.
Kannada BSI Bible 2016
ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದ ನಿಮ್ಮ ಮೂಲಕ ನಮ್ಮ ಕರ್ತನಾದ ಯೇಸುವಿನ ಹೆಸರಿಗೆ ಮಹಿಮೆ ಉಂಟಾಗುವದು; ಆತನ ಮೂಲಕ ನಿಮಗೂ ಮಹಿಮೆ ಉಂಟಾಗುವದು.
Kannada Bible (KNCL) BSI 2016
ಹೀಗೆ ನಿಮ್ಮ ಮುಖಾಂತರ ಪ್ರಭು ಯೇಸುವಿನ ನಾಮಕ್ಕೂ ಮತ್ತು ಅವರಲ್ಲಿ ನಿಮಗೂ ಮಹಿಮೆಯುಂಟಾಗಲಿ. ನಮ್ಮ ದೇವರ ಹಾಗು ಪ್ರಭು ಯೇಸುಕ್ರಿಸ್ತರ ಅನುಗ್ರಹದಿಂದ ಇದು ನೆರವೇರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ದೇವರ ಹಾಗೂ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯ ಅನುಸಾರವಾಗಿ, ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದಬೇಕು. ಮಾತ್ರವಲ್ಲದೇ ನೀವು ಕೂಡಾ ಅವರಲ್ಲಿ ಮಹಿಮೆ ಹೊಂದಬೇಕು ಎಂದು ಬೇಡಿಕೊಳ್ಳುತ್ತೇವೆ.