2 Thessalonians 1:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಸ್ತೋತ್ರ ಸಲ್ಲಿಸುತ್ತೇವೆ. ನಿಮ್ಮ ನಂಬಿಕೆಯು ಮತ್ತು ಇತರರ ಮೇಲೆ ನಿಮಗಿರುವ ಪ್ರೀತಿಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ನಿಮ್ಮ ವಿಷಯದಲ್ಲಿ ಸ್ತೋತ್ರ ಸಲ್ಲಿಸುವುದು ಯೋಗ್ಯವಾದ ಕಾರ್ಯವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರರೇ, ನಾವು ಯಾವಾಗಲೂ ನಿಮ್ಮನ್ನು ಕುರಿತು ದೇವರಿಗೆ ಕೃತಜ್ಞತಾಸ್ತುತಿ ಮಾಡುವುದಕ್ಕೆ ಬದ್ಧರಾಗಿದ್ದೇವೆ, ಹಾಗೆ ಮಾಡುವುದು ಯೋಗ್ಯವಾಗಿದೆ. ಏಕೆಂದರೆ ನೀವು ನಂಬಿಕೆಯಲ್ಲಿ ಬಹಳ ಅಭಿವೃದ್ಧಿ ಹೊಂದುತ್ತಾ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚಾಗುತ್ತಿದೆ.
Kannada BSI Bible 2016
ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಬರುತ್ತದೆ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚುತ್ತಾ ಬರುತ್ತದೆ.
Kannada Bible (KNCL) BSI 2016
ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ನಾವು ಯಾವಾಗಲೂ ನಿಮಗಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ. ಹಾಗೆ ಮಾಡುವುದು ಯೋಗ್ಯ. ಏಕೆಂದರೆ ನಿಮ್ಮ ವಿಶ್ವಾಸವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುತ್ತಾ ಇದೆ ಮತ್ತು ಪರಸ್ಪರ ನಿಮ್ಮೆಲ್ಲರಲ್ಲಿ ಪ್ರೀತಿಯೂ ಹೆಚ್ಚುತ್ತಿದೆ.