2 Thessalonians 1:8 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಭುಯೇಸು ಪರಲೋಕದಿಂದ ಬೆಂಕಿಯ ಜ್ವಾಲೆಗಳೊಡನೆ ಪ್ರತ್ಯಕ್ಷನಾದಾಗ ದೇವರನ್ನು ತಿಳಿದಿಲ್ಲದವರಿಗೂ ಸುವಾರ್ತೆಗೆ ವಿಧೇಯರಾಗಿಲ್ಲದವರಿಗೂ ದಂಡನೆಯನ್ನು ಬರಮಾಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.
Kannada BSI Bible 2016
ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ಒಳಪಡದವರಿಗೂ ಪ್ರತೀಕಾರವನ್ನು ಸಲ್ಲಿಸುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ದೇವರನ್ನು ಅರಿಯದವರಿಗೂ ನಮಗೆ ಕರ್ತ ಆಗಿರುವ ಯೇಸುವಿನ ಸುವಾರ್ತೆಗೆ ಅವಿಧೇಯರಾದವರಿಗೂ ಪ್ರತೀಕಾರ ಮಾಡುವರು.