2 Thessalonians 2:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಹೇಳುವ ಒಳ್ಳೆಯ ಸಂಗತಿಗಳಲ್ಲಿ ಮತ್ತು ಮಾಡುವ ಒಳ್ಳೆಯ ಕಾರ್ಯಗಳಲ್ಲಿ ನಿಮಗೆ ಬಲವನ್ನೂ ಆದರಣೆಯನ್ನೂ ಪ್ರಭುವಾದ ಯೇಸು ಕ್ರಿಸ್ತನು ಮತ್ತು ತಂದೆಯಾದ ದೇವರು ನಿಮಗೆ ದಯಪಾಲಿಸಲಿ ಎಂದು ನಾವು ಪ್ರಾರ್ಥಿಸುತ್ತೇವೆ. ದೇವರು ನಮ್ಮನ್ನು ಪ್ರೀತಿಸಿದನು. ಆತನು ತನ್ನ ಕೃಪೆಯಿಂದಲೇ ನಮಗೆ ಒಳ್ಳೆಯ ನಿರೀಕ್ಷೆಯನ್ನೂ ಶಾಶ್ವತವಾದ ಆದರಣೆಯನ್ನೂ ದಯಪಾಲಿಸಿದನು. (Verses 16-17)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,
Kannada BSI Bible 2016
ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಿಮ್ಮ ಹೃದಯಗಳನ್ನು ಸಂತೈಸಿ
Kannada Bible (KNCL) BSI 2016
ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಹಾಗೂ ನಮ್ಮ ತಂದೆ ದೇವರು ನಮ್ಮನ್ನು ಪ್ರೀತಿಸಿ ಕೃಪೆಯಿಂದ ಕೊಟ್ಟಿರುವ ನಮಗೆ ನಿತ್ಯ ಆದರಣೆಯನ್ನೂ ಒಳ್ಳೆಯ ನಿರೀಕ್ಷೆಯನ್ನೂ ನೀಡಿ,