2 Thessalonians 2:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸಲು ಅವಕಾಶ ನೀಡದಿರಿ. ಜನರು ದೇವರಿಗೆ ವಿಮುಖರಾಗದ ಹೊರತು, ಅಧರ್ಮಸ್ವರೂಪನು ಕಾಣಿಸಿಕೊಳ್ಳದ ಹೊರತು ಆ ದಿನವು ಬರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ.
Kannada BSI Bible 2016
ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ;
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ; ಯಾಕಂದರೆ ಮೊದಲು ಮತಭ್ರಷ್ಟತೆಯು ಉಂಟಾಗಿ ಅಧರ್ಮಸ್ವರೂಪನು ಬೈಲಿಗೆ ಬಂದ ಹೊರತು ಆ ದಿನವು ಬರುವದಿಲ್ಲ.
Kannada Bible (KNCL) BSI 2016
ನಿಮ್ಮನ್ನು ಯಾರೂ ಯಾವ ರೀತಿಯಲ್ಲೂ ವಂಚಿಸದಿರಲಿ. ಆ ದಿನವು ಬರುವುದಕ್ಕೆ ಮುಂಚೆ ದೇವರಿಗೆ ವಿರುದ್ಧವಾದ ‘ಅಂತಿಮ ಪ್ರತಿಭಟನೆ’ ಉಂಟಾಗುವುದು. ‘ಪಾಪಪುರುಷನಾದ’ ಅಧರ್ಮಿ ತಲೆ ಎತ್ತಿಕೊಳ್ಳುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮನ್ನು ಯಾರೂ ಯಾವ ವಿಧದಲ್ಲಿಯೂ ವಂಚಿಸದಿರಲಿ. ಏಕೆಂದರೆ ವಿಶ್ವಾಸದಿಂದ ಬಿದ್ದುಹೋಗುವಿಕೆಯು ಸಂಭವಿಸಿ, ನಾಶಕ್ಕೆ ನೇಮಕವಾಗಿರುವ ನಿಯಮ ಮೀರುವ ಮನುಷ್ಯನು ಬರುವುದಕ್ಕೆ ಮುಂಚೆ ಕರ್ತ ಯೇಸುವಿನ ದಿನವು ಬರುವುದಿಲ್ಲ!