2 Thessalonians 2:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರೆಂದು ಕರೆಸಿಕೊಳ್ಳುವ ಏನನ್ನೇ ಆಗಲಿ, ಜನರು ಪೂಜಿಸುವ ಯಾವುದನ್ನೇ ಆಗಲಿ ಅಧರ್ಮಸ್ವರೂಪನು ವಿರೋಧಿಸಿ, ಅವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡು ದೇವರ ಆಲಯದೊಳಕ್ಕೆ ಹೋಗಿ ಕುಳಿತುಕೊಂಡು ತಾನೇ ದೇವರೆಂದು ಹೇಳಿಕೊಳ್ಳುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.
Kannada BSI Bible 2016
ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವದು ದೇವರೆನಿಸಿಕೊಳ್ಳುತ್ತದೋ ಯಾವದು ಪೂಜೆ ಹೊಂದುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಹೇಳಿಕೊಂಡು ದೇವರ ಗರ್ಭಗುಡಿಯಲ್ಲೇ ಕೂತುಕೊಳ್ಳುತ್ತಾನೆ.
Kannada Bible (KNCL) BSI 2016
ದೇವರೆನಿಸಿಕೊಳ್ಳುವ ಎಲ್ಲವನ್ನೂ ಅಲ್ಲಗಳೆಯುವನು; ಆರಾಧನೆಗೈಯುವ ಎಲ್ಲವನ್ನೂ ಇಲ್ಲಗೊಳಿಸುವನು; ಇವೆಲ್ಲಕ್ಕೂ ತಾವೇ ಮಿಗಿಲೆಂದು ಭಾವಿಸಿ ದೇವಮಂದಿರದಲ್ಲಿ ಕುಳಿತುಕೊಂಡು ತಾನೇ ದೇವರೆಂದು ಘೋಷಿಸಿಕೊಳ್ಳುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರೆಣಿಸಿಕೊಳ್ಳುವ ಎಲ್ಲವನ್ನೂ ಆರಾಧಿಸಲಾಗುವ ಪ್ರತಿಯೊಂದನ್ನೂ ಅವನು ವಿರೋಧಿಸಿ ನಿಲ್ಲುವನು. ದೇವರಿಗೆ ಸಂಬಂಧಿಸಿದ ಇವೆಲ್ಲವುಗಳ ಮೇಲೆ ತನ್ನನ್ನು ಹೆಚ್ಚಿಸಿಕೊಳ್ಳುವನು. ತಾನೇ ದೇವರೆಂದು ಘೋಷಿಸಿ ದೇವರ ಆಲಯದಲ್ಲಿ ಕೂತುಕೊಳ್ಳುವನು.