2 Thessalonians 2:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಹಸ್ಯವಾದ ದುಷ್ಟಶಕ್ತಿಯು ಈಗಾಗಲೇ ಪ್ರಪಂಚದಲ್ಲಿ ತನ್ನ ಕಾರ್ಯವನ್ನು ಸಾಧಿಸುತ್ತಾ ಇದೆ. ಆದರೆ ಆ ರಹಸ್ಯವಾದ ದುಷ್ಟಶಕ್ತಿಯನ್ನು ತಡೆಹಿಡಿಯುವ ಒಬ್ಬಾತನಿದ್ದಾನೆ. ಆತನು ತೆಗೆದುಬಿಡಲ್ಪಟ್ಟ ಕೂಡಲೇ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಧರ್ಮವು ಈಗಲೂ ಗುಪ್ತವಾಗಿ ತನ್ನ ಕಾರ್ಯವನ್ನು ಸಾಧಿಸುತ್ತದೆ, ಆದರೆ ತಡೆಗಟ್ಟುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು.
Kannada BSI Bible 2016
ದುಷ್ಟತ್ವದ ಮರ್ಮವು ಈಗಾಗಲೇ ಕಾರ್ಯ ಮಾಡುತ್ತದೆ; ಅವನು ತೆಗೆಯಲ್ಪಡುವವರೆಗೆ ಈಗ ಅಡ್ಡಿ ಮಾಡುವಾತನು ಮಾತ್ರಅಡ್ಡಿ ಮಾಡುವನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಅಧರ್ಮವು ಈಗಲೂ ಗುಪ್ತವಾಗಿ ತನ್ನ ಕಾರ್ಯವನ್ನು ಸಾಧಿಸುತ್ತದೆ; ಆದರೆ ಇದುವರೆಗೆ ಅಡ್ಡಿಮಾಡುವವನು ತೆಗೆದುಬಿಡಲ್ಪಡುವ ತನಕ ಅದು ಗುಪ್ತವಾಗಿಯೇ ಇರುವದು.
Kannada Bible (KNCL) BSI 2016
ಅಧರ್ಮವು ಈಗಾಗಲೇ ಗುಪ್ತವಾಗಿ ತನ್ನ ಕೆಲಸವನ್ನು ಸಾಧಿಸುತ್ತಿದೆ; ತಡೆಗಟ್ಟಿರುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ನಿಯಮ ಮೀರುವ ರಹಸ್ಯ ಶಕ್ತಿಯು ಈಗಾಗಲೇ ಕಾರ್ಯಮಾಡುತ್ತಿದೆ. ಅವನನ್ನು ದಾರಿಯಿಂದ ತೆಗೆಯುವವರೆಗೆ ಈಗ ಅಡ್ಡಿಮಾಡುವಾತನು ಅಡ್ಡಿ ಮಾಡುತ್ತಲೇ ಇರುವನು.