2 Thessalonians 2:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಅಧರ್ಮಸ್ವರೂಪನು ಸೈತಾನನ ಮಹಾಶಕ್ತಿಯಿಂದ ಕೂಡಿದವನಾಗಿರುತ್ತಾನೆ. ಅವನು ಅನೇಕ ಮೋಸದ ಪವಾಡಗಳನ್ನು, ಸೂಚಕಕಾರ್ಯಗಳನ್ನು, ಅದ್ಭುತಕಾರ್ಯಗಳನ್ನು ಮಾಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,
Kannada BSI Bible 2016
ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಅಧರ್ಮಸ್ವರೂಪನ ಪ್ರತ್ಯಕ್ಷತೆಯು ಸೈತಾನನ ಮಾಟಕ್ಕನುಗುಣವಾಗಿರುವದು. ಅದು ಮೋಸಗೊಳಿಸುವ ಸಕಲವಿಧವಾದ ಮಹತ್ಕಾರ್ಯ ಸೂಚಕಕಾರ್ಯ ಅದ್ಭುತಕಾರ್ಯ ಇವುಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶನ ಮಾರ್ಗದಲ್ಲಿರುವವರಿಗೋಸ್ಕರ ಸಂಭವಿಸುವದು.
Kannada Bible (KNCL) BSI 2016
ಆ ಅಧರ್ಮಿ ಸೈತಾನನ ಶಕ್ತಿಯೊಂದಿಗೆ ಬರುವನು. ಮೋಸಗೊಳಿಸುವ ಎಲ್ಲಾ ಬಗೆಯ ಪವಾಡಗಳನ್ನು, ಚಮತ್ಕಾರಗಳನ್ನು ಮತ್ತು ಶಕ್ತಿಯುತ ಕಾರ್ಯಗಳನ್ನು ಮಾಡಿತೋರಿಸುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ನಿಯಮ ಮೀರುವವನ ಬರುವಿಕೆಯು ಸೈತಾನನ ಕಾರ್ಯಗಳಿಗೆ ಅನುಸಾರವಾಗಿರುವುದು. ಅವು ಎಲ್ಲಾ ಶಕ್ತಿಯ ಪ್ರದರ್ಶನದಿಂದಲೂ ಸುಳ್ಳಾದ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಇರುವವು.