2 Thessalonians 3:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಹೋದರ ಸಹೋದರಿಯರೇ, ನಮಗೋಸ್ಕರ ಪ್ರಾರ್ಥಿಸಿರಿ. ಪ್ರಭುವಿನ ಉಪದೇಶವು ತ್ವರಿತಗತಿಯಲ್ಲಿ ಹಬ್ಬಲೆಂದು ಪ್ರಾರ್ಥಿಸಿ. ನಿಮ್ಮಂತೆಯೇ ಇತರ ಜನರು ಈ ಉಪದೇಶವನ್ನು ಗೌರವಿಸುವಂತೆ ಪ್ರಾರ್ಥಿಸಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಡೆಯದಾಗಿ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ,
Kannada BSI Bible 2016
ಕಡೇದಾಗಿ ಸಹೋದರರೇ, ನಮಗೋ ಸ್ಕರ ಪ್ರಾರ್ಥನೆ ಮಾಡಿರಿ ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಮಹಿಮೆ ಹೊಂದುವ ಹಾಗೆಯೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಕಡೇ ಮಾತೇನಂದರೆ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಪ್ರಖ್ಯಾತಿ ಹೊಂದುವ ಹಾಗೆಯೂ
Kannada Bible (KNCL) BSI 2016
ಕೊನೆಯದಾಗಿ ಸಹೋದರರೇ, ನಮಗಾಗಿಯೂ ಪ್ರಾರ್ಥನೆಮಾಡಿ; ಪ್ರಭುವಿನ ಸಂದೇಶ ನಿಮ್ಮಲ್ಲಿ ಹಬ್ಬಿಹರಡಿದಂತೆ ಎಲ್ಲೆಲ್ಲಿಯೂ ಪಸರಿಸಿ ಪ್ರಖ್ಯಾತವಾಗಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೊನೆಯದಾಗಿ ಪ್ರಿಯರೇ, ಕರ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಹಬ್ಬಿದಂತೆ ಎಲ್ಲ ಕಡೆಗಳಲ್ಲಿಯೂ ಅತಿವೇಗದಿಂದ ಹಬ್ಬಿ ಹರಡುವಂತೆ ನಮಗಾಗಿ ಬೇಡಿಕೊಳ್ಳಿರಿ.