2 Thessalonians 3:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತಮ್ಮ ಕೆಲಸವನ್ನು ತಾವು ನೋಡಿಕೊಳ್ಳುವಂತೆ ಅವರಿಗೆ ಆಜ್ಞಾಪಿಸುತ್ತಿದ್ದೇವೆ. ಅವರೇ ದುಡಿದು ತಮ್ಮ ಆಹಾರವನ್ನು ಸಂಪಾದಿಸಿಕೊಳ್ಳಬೇಕೆಂದು ಆಜ್ಞಾಪಿಸಿ ಪ್ರಭುವಾದ ಯೇಸು ಕ್ರಿಸ್ತನಲ್ಲಿ ಬೇಡಿಕೊಳ್ಳುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಂಥವರು ತಮ್ಮ ಕೆಲಸಕಾರ್ಯಗಳನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಬುದ್ಧಿ ಹೇಳುತ್ತೇವೆ.
Kannada BSI Bible 2016
ಅಂಥವರು ಮೌನವಾಗಿ ತಮ್ಮ ಕೆಲಸವನ್ನು ಮಾಡುತ್ತಾ ತಮ್ಮ ಸ್ವಂತ ಆಹಾರವನ್ನೇ ಊಟಮಾಡ ಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಂಥವರು ತಮ್ಮ ಕೆಲಸವನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.
Kannada Bible (KNCL) BSI 2016
ಇಂಥವರು ತಮ್ಮ ಜೀವನೋಪಾಯಕ್ಕಾಗಿ ತಾವೇ ದುಡಿದು ಸಂಪಾದಿಸಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ಎಚ್ಚರಿಸಿ ಆಜ್ಞಾಪಿಸುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂಥವರು ಶಾಂತವಾಗಿ ಕೆಲಸಮಾಡಿ ತಮ್ಮ ಸ್ವಂತ ಆಹಾರವನ್ನೇ ಊಟ ಮಾಡಬೇಕೆಂದು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.