2 Thessalonians 3:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಪತ್ರದ ಮೂಲಕ ನಿಮಗೆ ತಿಳಿಸಿರುವ ಮಾತುಗಳಿಗೆ ಯಾವನಾದರೂ ವಿಧೇಯನಾಗದಿದ್ದರೆ, ಅವನು ಯಾರೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ. ಅವನ ಸಹವಾಸಮಾಡಬೇಡಿ. ಆಗ ಅವನಿಗೆ ನಾಚಿಕೆ ಆಗಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
Kannada BSI Bible 2016
ಈ ಪತ್ರಿಕೆಯ ಮೂಲಕ ವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ವಿಧೇಯನಾಗದಿದ್ದರೆ ಅವನನ್ನು ಗುರುತು ಇಟ್ಟು ಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತು ಇಟ್ಟುಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
Kannada Bible (KNCL) BSI 2016
ಈ ಪತ್ರದ ಮೂಲಕ ನಾವು ಹೇಳಿರುವ ಮಾತನ್ನು ಯಾರಾದರೂ ಕೇಳದಿದ್ದರೆ, ಅಂಥವನನ್ನು ಗುರುತಿಸಿ ಅವನ ಸಹವಾಸವನ್ನೇ ತೊರೆದುಬಿಡಿ. ಹೀಗೆ ಮಾಡಿದರೆ, ಅವನಿಗೆ ನಾಚಿಕೆಯಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಪತ್ರದ ಮೂಲಕ ಹೇಳಿರುವ ನಮ್ಮ ಮಾತಿಗೆ ಯಾರಾದರೂ ವಿಧೇಯರಾಗದಿದ್ದರೆ ಅಂಥವರನ್ನು ಗುರುತಿಸಿ ಅವರಿಗೆ ನಾಚಿಕೆಯಾಗುವಂತೆ ಅವರ ಸಹವಾಸದಲ್ಲಿ ಸೇರಬೇಡಿರಿ.