2 Thessalonians 3:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೌಲನಾದ ನಾನು ಈಗ ನನ್ನ ಕೈಬರಹದಿಂದ ಈ ಪತ್ರವನ್ನು ಮುಕ್ತಾಯಗೊಳಿಸುತ್ತೇನೆ. ನನ್ನ ಪತ್ರಗಳಿಗೆಲ್ಲಾ ಇದೇ ನನ್ನ ಗುರುತು. ಇದೇ ನನ್ನ ಕೈ ಬರಹ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ. ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ನನ್ನ ಗುರುತು, ಹೀಗೆಯೇ ನನ್ನ ಕೈ ಬರಹ.
Kannada BSI Bible 2016
ಪೌಲನೆಂಬ ನಾನು ನನ್ನ ಸ್ವಂತ ಕೈಯಿಂದ ಬರೆಯುವ ವಂದನೆಯು, ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ಗುರುತು; ಹೀಗೆಯೇ ಬರೆಯುತ್ತೇನೆ.ನಮ್ಮ ಕರ್ತ ನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ; ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ಗುರುತು; ಹೀಗೆಯೇ ನನ್ನ ಕೈಬರಹ.
Kannada Bible (KNCL) BSI 2016
ಪೌಲನೆಂಬ ನಾನು ಸ್ವತಃ ನನ್ನ ಕೈಯಿಂದಲೇ ಇದನ್ನು ಬರೆಯುತ್ತಿದ್ದೇನೆ. ನನ್ನ ಪ್ರತಿ ಪತ್ರಕ್ಕೂ, ನಾನು ಹಾಕುವ ಸಹಿ ಹಾಗು ನಾನು ಬರೆಯುವ ಧಾಟಿ ಇದೇ. ನಿಮಗೆ ನನ್ನ ಶುಭಾಶಯಗಳು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೌಲನೆಂಬ ನಾನು ಸ್ವತಃ ನನ್ನ ಕೈಯಿಂದ ಬರೆದ ವಂದನೆಯಿದು. ನನ್ನ ಎಲ್ಲಾ ಪತ್ರಗಳಲ್ಲಿಯೂ ಇದೇ ಗುರುತು. ನಾನು ಹೀಗೆಯೇ ಬರೆಯುತ್ತೇನೆ.