2 Thessalonians 3:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಹೋದರ ಸಹೋದರಿಯರೇ, ಕೆಲಸ ಮಾಡದ ವಿಶ್ವಾಸಿಯಿಂದ ನೀವು ದೂರವಿರಬೇಕೆಂದು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಅಧಿಕಾರದಿಂದ ನಿಮಗೆ ಆಜ್ಞಾಪಿಸುತ್ತಿದ್ದೇವೆ. ನಾವು ನೀಡಿದ ಉಪದೇಶವನ್ನು ಅವರು ಅನುಸರಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ ಸಹೋದರನಿಂದ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.
Kannada BSI Bible 2016
ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ನವ್ಮಿುಂದ ಹೊಂದಿದ ಬೋಧನೆಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.
Kannada Bible (KNCL) BSI 2016
ಪ್ರಿಯ ಸಹೋದರರೇ, ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ: ನಾವು ನಿಮಗೆ ಬೋಧಿಸಿದ ಸದಾಚಾರವನ್ನು ಪಾಲಿಸದೆ, ಮೈಗಳ್ಳತನದಿಂದ ದಿನಗಳೆಯುವ ಯಾವ ಸೋದರನೊಂದಿಗೂ ಸಂಪರ್ಕವಿಟ್ಟುಕೊಳ್ಳಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ, ನಮ್ಮಿಂದ ಸ್ವೀಕರಿಸಿದ ಬೋಧನೆಯನ್ನು ಅನುಸರಿಸದೆ, ಸೋಮಾರಿಯಾಗಿ ಅಶಿಸ್ತಿನಿಂದ ನಡೆಯುವ ಪ್ರತಿ ವಿಶ್ವಾಸಿಗೆ ನೀವು ದೂರವಾಗಿರಬೇಕು.