2 Thessalonians 3:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಣ ಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ. ನಿಮ್ಮಲ್ಲಿ ಯಾರಿಗೂ ತೊಂದರೆಯಾಗಬಾರದೆಂದು ಹಗಲಿರುಳು ಎಡೆಬಿಡದೆ ಕೆಲಸ ಮಾಡಿದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ, ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು.
Kannada BSI Bible 2016
ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ; ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟಮಾಡಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನಮಾಡಿಕೊಂಡೆವು.
Kannada Bible (KNCL) BSI 2016
ಪುಕ್ಕಟೆಯಾಗಿ ನಾವು ಯಾರ ಅನ್ನವನ್ನೂ ಉಣ್ಣಲಿಲ್ಲ. ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳೂ ನಾವೇ ಕಷ್ಟಪಟ್ಟು ದುಡಿದಿದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಉಚಿತವಾಗಿ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ. ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರದೆಂದು ಹಗಲಿರುಳೂ ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದೆವು.