2 Timothy 1:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.
Kannada BSI Bible 2016
ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದರ ನಿವಿುತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶದಲ್ಲಿಟ್ಟಿರುವದನ್ನು ಆತನು ಆ ದಿನಕ್ಕಾಗಿ ಕಾಪಾಡುವದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.
Kannada Bible (KNCL) BSI 2016
ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಕ್ಕಾಗಿಯೇ ನಾನು ಈ ಶ್ರಮೆಗಳನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ಏಕೆಂದರೆ ನಾನು ನಂಬಿರುವ ಕ್ರಿಸ್ತ ಯೇಸುವನ್ನು ಬಲ್ಲೆನು. ನಾನು ಕ್ರಿಸ್ತ ಯೇಸುವಿಗೆ ಒಪ್ಪಿಸಿದ್ದನ್ನು ಅವರು ಆ ದಿನಕ್ಕಾಗಿ ಕಾಪಾಡುವುದಕ್ಕೆ ಶಕ್ತರಾಗಿದ್ದಾರೆಂಬ ದೃಢವಿಶ್ವಾಸ ನನಗಿದೆ.