2 Timothy 1:2 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಿಮೊಥೆಯನೇ, ನೀನು ನನಗೆ ಪ್ರಿಯ ಮಗನಂತಿರುವೆ. ತಂದೆಯಾದ ದೇವರಿಂದ ಮತ್ತು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಿಂದ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಲಭಿಸಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ಪ್ರಿಯ ಕುಮಾರನಾದ ತಿಮೊಥೆಯನಿಗೆ ಬರೆಯುವುದೇನಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತಯೇಸುವಿನಿಂದಲೂ ನಿನಗೆ ಕೃಪೆಯೂ, ಕರುಣೆಯೂ, ಶಾಂತಿಯೂ ಆಗಲಿ.
Kannada BSI Bible 2016
ನನ್ನ ಅತಿ ಪ್ರಿಯಕುಮಾರನಾದ ತಿಮೊಥೆಯನಿಗೆ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಪ್ರಿಯ ಕುಮಾರನಾದ ತಿಮೊಥೆಯನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಪ್ರಿಯ ಪುತ್ರನಾದ ತಿಮೊಥೆಯನಿಗೆ ಬರೆಯುವುದು: ತಂದೆ ದೇವರಿಂದಲೂ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.