2 Timothy 1:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ನಿಜವಾದ ನಂಬಿಕೆಯು ನನ್ನ ನೆನಪಿನಲ್ಲಿದೆ. ಆ ವಿಧವಾದ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಲ್ಲೂ ನಿನ್ನ ತಾಯಿಯಾದ ಯೂನಿಕೆಯಲ್ಲೂ ಇತ್ತು. ಈಗ ಅದೇ ನಂಬಿಕೆಯು ನಿನ್ನಲ್ಲಿಯೂ ಇದೆಯೆಂದು ನನಗೆ ತಿಳಿದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನಲ್ಲಿರುವ ಯಥಾರ್ಥವಾದ ನಂಬಿಕೆಯು ನನ್ನ ನೆನಪಿಗೆ ಬಂದಿತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಳಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು. ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.
Kannada BSI Bible 2016
ನಿನ್ನಲ್ಲಿರುವ ನಿಷ್ಕಪಟ ವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ಮೊದಲು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು: ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ನಾನು ದೃಢವಾಗಿ ನಂಬಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನಲ್ಲಿರುವ ನಿಷ್ಕಪಟವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು; ಹಾಗೆಯೇ ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.
Kannada Bible (KNCL) BSI 2016
ನಿನ್ನ ದೃಢವಿಶ್ವಾಸವು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿ ಲೋವಿಯಳಲ್ಲೂ ತಾಯಿ ಯೂನಿಸಳಲ್ಲೂ ನೆಲೆಗೊಂಡಿದ್ದ ವಿಶ್ವಾಸ ಈಗ ನಿನ್ನಲ್ಲೂ ಪೂರ್ಣವಾಗಿ ನೆಲೆಗೊಂಡಿದೆಯೆಂದು ನಾನು ನಂಬಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನಲ್ಲಿರುವ ನಿಷ್ಕಪಟವಾದ ನಂಬಿಕೆಯು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನಿಕೆಯಲ್ಲಿಯೂ ಮೊದಲು ಇದ್ದ ನಂಬಿಕೆಯು ಈಗ ನಿನ್ನಲ್ಲಿಯೂ ಇದೆಯೆಂದು ನಾನು ದೃಢವಾಗಿ ನಂಬಿದ್ದೇನೆ.