2 Timothy 1:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ನಿನಗೆ ದಯಪಾಲಿಸಿರುವ ವರವನ್ನು ನೀನು ನೆನಪು ಮಾಡಿಕೊಳ್ಳಬೇಕೆಂದು ನಾನು ಅಪೇಕ್ಷಿಸುವುದು ಈ ಕಾರಣದಿಂದಲೇ. ನಾನು ನನ್ನ ಕೈಗಳನ್ನು ನಿನ್ನ ಮೇಲಿಟ್ಟಾಗ ಆತನು ನಿನಗೆ ಆ ವರವನ್ನು ದಯಪಾಲಿಸಿದನು. ಬೆಂಕಿಯ ಕಿಡಿಯು ಪ್ರಜ್ವಲವಾಗಿ ದಟ್ಟವಾದ ಬೆಂಕಿಯಾಗುವಂತೆ ನಿನ್ನ ವರವನ್ನು ಉಪಯೋಗಿಸುತ್ತಾ ಅದನ್ನು ಅಧಿಕಗೊಳಿಸಬೇಕೆಂಬುದು ನನ್ನ ಅಪೇಕ್ಷೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ ದೇವರ ಕೃಪಾವರವನ್ನು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನ್ನನ್ನು ಜ್ಞಾಪಿಸುತ್ತಿದ್ದೇನೆ.
Kannada BSI Bible 2016
ಆದಕಾರಣ ನಾನು ನಿನಗೆ ಹಸ್ತಾರ್ಪಣ ಮಾಡು ವದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ ದೇವರ ಕೃಪಾವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕಕೊಡುತ್ತೇನೆ.
Kannada Bible (KNCL) BSI 2016
ನಾನು ನಿನ್ನ ಮೇಲೆ ಹಸ್ತ ನಿಕ್ಷೇಪಮಾಡಿ ಪ್ರಾರ್ಥಿಸಿದಾಗ ನೀನು ಪಡೆದಂಥ ವರದಾನವನ್ನು ಪುನಃ ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತಗಳನ್ನು ಇಟ್ಟಿದ್ದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.