2 Timothy 1:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ನಮ್ಮನ್ನು ರಕ್ಷಿಸಿ, ತನ್ನ ಪವಿತ್ರ ಜನರಾಗಿರುವುದಕ್ಕಾಗಿ ನಮ್ಮನ್ನು ಕರೆದನು. ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದ ಹೀಗಾಯಿತು ಎಂದಲ್ಲ. ಆತನು ತನ್ನ ಸಂಕಲ್ಪಕ್ಕನುಸಾರವಾಗಿ ಮತ್ತು ಕೃಪೆಗನುಸಾರವಾಗಿ ನಮ್ಮನ್ನು ರಕ್ಷಿಸಿ ತನ್ನವರನ್ನಾಗಿ ಮಾಡಿದನು. ಅನಾದಿಕಾಲದಲ್ಲಿಯೇ ಈ ಕೃಪೆಯು ಕ್ರಿಸ್ತ ಯೇಸುವಿನ ಮೂಲಕ ನಮಗೆ ದೊರೆಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,
Kannada BSI Bible 2016
ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ನಮ್ಮಲ್ಲಿ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವದಕ್ಕೆ ಕರೆದನು.
Kannada Bible (KNCL) BSI 2016
ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು.