2 Timothy 2:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನಾನು ತಾಳ್ಮೆಯಿಂದಲೇ ಈ ತೊಂದರೆಗಳನ್ನು ಅಂಗೀಕರಿಸಿದ್ದೇನೆ. ಏಕೆಂದರೆ ದೇವರು ಆರಿಸಿರುವ ಜನರೆಲ್ಲರಿಗೂ ಸಹಾಯ ಮಾಡಬೇಕೆಂಬುದು ನನ್ನ ಅಪೇಕ್ಷೆಯಾಗಿದೆ. ಆ ಜನರು ಕ್ರಿಸ್ತ ಯೇಸುವಿನಲ್ಲಿ ರಕ್ಷಣೆ ಪಡೆಯಲೆಂದು ನಾನು ಈ ತೊಂದರೆಗಳನ್ನೆಲ್ಲ ಸ್ವೀಕರಿಸಿಕೊಂಡಿದ್ದೇನೆ. ಈ ರಕ್ಷಣೆಯೊಂದಿಗೆ ನಿತ್ಯಪ್ರಭಾವವು ದೊರೆಯುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ.
Kannada BSI Bible 2016
ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ದೇವರಾರಿಸಿಕೊಂಡವರು ನನ್ನ ಕೂಡ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.
Kannada Bible (KNCL) BSI 2016
ದೇವರಿಂದ ಆಯ್ಕೆಯಾದ ಪ್ರಜೆಗಳು ಪ್ರಭು ಯೇಸುವಿನಲ್ಲಿ ಲಭಿಸುವ ಜೀವೋದ್ಧಾರವನ್ನೂ ಅನಂತಮಹಿಮೆಯನ್ನೂ ನನ್ನೊಂದಿಗೆ ಪಡೆಯಲೆಂದು ನಾನು ಇದೆಲ್ಲವನ್ನೂ ಅವರಿಗಾಗಿ ಸಹಿಸುತ್ತಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ.