2 Timothy 2:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರಿಗೆ ಈ ಸಂಗತಿಗಳನ್ನು ತಿಳಿಸುತ್ತಲೇ ಇರು. ಪದಗಳ ಬಗ್ಗೆ ವಾಗ್ವಾದ ಮಾಡಬಾರದೆಂದು ಅವರಿಗೆ ದೇವರ ಸನ್ನಿಧಿಯಲ್ಲಿ ಎಚ್ಚರಿಕೆ ನೀಡು. ವಾಗ್ವಾದಗಳಿಂದ ಯಾರಿಗೂ ಪ್ರಯೋಜನವಿಲ್ಲ. ವಾಗ್ವಾದವನ್ನು ಕೇಳುವ ಜನರು ಅದರಿಂದ ನಾಶವಾಗುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವುದಲ್ಲದೇ, ಯಾವ ಪ್ರಯೋಜನಕ್ಕೂ ಬಾರದ ತರ್ಕ ವಾಗ್ವಾದಗಳನ್ನು ಮಾಡಬಾರದೆಂದು, ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು.
Kannada BSI Bible 2016
ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂ ಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು.
Kannada Bible (KNCL) BSI 2016
ಈ ವಿಷಯಗಳನ್ನು ನಿನ್ನ ಸಭೆಯವರಿಗೆ ಜ್ಞಾಪಕಪಡಿಸು. ವ್ಯರ್ಥವಾದ ವಾಗ್ವಾದಗಳನ್ನು ನಿಲ್ಲಿಸಬೇಕೆಂದು ಅವರನ್ನು ದೇವರ ಮುಂದೆ ಖಂಡಿತವಾಗಿ ಎಚ್ಚರಿಸು. ಇಂಥ ವಾಗ್ವಾದಗಳಿಂದ ಕೇಳುವವರಿಗೆ ಕೇಡಾಗುವುದೇ ಹೊರತು ಒಳಿತೇನೂ ಆಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ವಿಷಯಗಳನ್ನು ದೇವಜನರ ನೆನಪಿಗೆ ತರಬೇಕು. ಕೇಳುವವರಿಗೆ ಯಾವ ಪ್ರಯೋಜನವನ್ನೂ ಉಂಟು ಮಾಡದೆ ಕೆಡವಿ ಹಾಕುವ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ದೇವರ ಮುಂದೆ ಎಚ್ಚರಿಸು.