2 Timothy 2:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರ ದೃಷ್ಟಿಯಲ್ಲಿ ಯೋಗ್ಯ ವ್ಯಕ್ತಿಯಾಗಲು ನಿನ್ನಿಂದಾದಷ್ಟು ಪ್ರಯಾಸಪಡು ಮತ್ತು ನಿನ್ನನ್ನೇ ಒಪ್ಪಿಸಿಕೊಡು. ತನ್ನ ಕೆಲಸದಲ್ಲಿ ನಾಚಿಕೆಪಡದಿರುವ ಕೆಲಸಗಾರನಾಗು, ಅಂದರೆ ಸತ್ಯೋಪದೇಶವನ್ನು ಯೋಗ್ಯವಾದ ರೀತಿಯಲ್ಲಿ ತಿಳಿಸುವವನಾಗು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.
Kannada BSI Bible 2016
ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ದೇವರ ದೃಷ್ಟಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.
Kannada Bible (KNCL) BSI 2016
ನೀನಾದರೋ ದೇವರಿಗೆ ಮೆಚ್ಚುಗೆಯಾದವನಂತೆ, ತನ್ನ ಕೆಲಸಕ್ಕೆ ಹಿಂದೆಗೆಯದ ಕೆಲಸಗಾರನಂತೆ, ಸುವಾರ್ತೆಯನ್ನು ಸರಿಯಾಗಿ ಸಾರುವವನಂತೆ, ಸುವಾರ್ತೆಯನ್ನು ಸರಿಯಾಗಿ ಸಾರುವವನಂತೆ ಬಾಳಲು ಪ್ರಯತ್ನಪಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನಾಚಿಕೆಗೆ ಒಳಪಡದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಬೋಧಿಸುವವನೂ ಆಗಿರುವಂತೆ ನಿನ್ನನ್ನು ದೇವರಿಗೆ ಮೆಚ್ಚಿಕೆಯಾದವನಾಗಿರಲು ಸಮರ್ಪಿಸಲು ಅತ್ಯಂತ ಆಸಕ್ತನಾಗಿರು.