2 Timothy 2:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಸತ್ಯೋಪದೇಶವನ್ನು ತಿರಸ್ಕರಿಸಿದರು. ಎಲ್ಲಾ ಜನರಿಗೆ ಉಂಟಾಗುವ ಪುನರುತ್ಥಾನವು ಈಗಾಗಲೇ ಆಗಿ ಹೋಗಿದೆಯೆಂದು ಅವರು ಹೇಳುತ್ತಾರೆ. ಅವರಿಬ್ಬರು ಕೆಲವು ಜನರ ನಂಬಿಕೆಯನ್ನು ಹಾಳುಮಾಡುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಸತ್ಯಭ್ರಷ್ಟರಾಗಿ ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಹಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ.
Kannada BSI Bible 2016
ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಸತ್ಯಭ್ರಷ್ಟರಾಗಿ ಕೆಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ.
Kannada Bible (KNCL) BSI 2016
ಇವರು ಸತ್ಯಮಾರ್ಗವನ್ನು ತ್ಯಜಿಸಿದ್ದಾರಲ್ಲದೆ ನಮ್ಮ ಪುನರುತ್ಥಾನವು ಈಗಾಗಲೇ ಮುಗಿದುಹೋಗಿದೆಯೆಂದು ಹೇಳುತ್ತಾ ಕೆಲವರ ವಿಶ್ವಾಸವನ್ನು ಕೆಡಿಸುತ್ತಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಪುನರುತ್ಥಾನವು ಆಗಲೇ ಆಗಿ ಹೋಯಿತೆಂದು ಹೇಳುತ್ತಾ ಸತ್ಯದ ಗುರಿಯನ್ನು ತಪ್ಪಿದವರಾಗಿ ಕೆಲವರ ವಿಶ್ವಾಸವನ್ನು ಕೆಡಿಸಿಬಿಡುವವರಾಗಿದ್ದಾರೆ.