2 Timothy 2:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.
Kannada BSI Bible 2016
ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ - ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕಂತಲೂ ಲಿಪಿಯುಂಟು.
Kannada Bible (KNCL) BSI 2016
ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.