2 Timothy 2:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗಿರಲಾಗಿ ಒಬ್ಬನು ತನ್ನ ದುಷ್ಕೃತ್ಯಗಳನ್ನು ತೊರೆದು ತನ್ನನ್ನು ಶುದ್ಧೀಕರಿಸಿಕೊಂಡರೆ ಅವನನ್ನು ಬಳಸಲಾಗುವುದು. ಅವನು ದೇವರ ಸೇವೆಗೆ ಮೀಸಲಾಗುತ್ತಾನೆ; ಯಜಮಾನನಿಗೆ ಉಪಯುಕ್ತನಾಗುತ್ತಾನೆ; ಸತ್ಕಾರ್ಯಗಳನ್ನು ಕೈಕೊಳ್ಳಲು ಸಿದ್ಧನಾಗಿರುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ, ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು. ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ, ಯಜಮಾನನಿಗೆ ಉಪಯುಕ್ತನಾಗಿಯೂ, ಸಕಲ ಸತ್ಕ್ರಿಯೆಗಳನ್ನು ಮಾಡುವುದಕ್ಕೆ ಸಿದ್ಧನಾಗಿಯೂ ಇರುವನು.
Kannada BSI Bible 2016
ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು; ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ ಯಜಮಾನನಿಗೆ ಉಪಯುಕ್ತನಾಗಿಯೂ ಸಕಲ ಸತ್ಕ್ರಿಯೆಗಳನ್ನು ಮಾಡುವದಕ್ಕೆ ಸಿದ್ಧನಾಗಿಯೂ ಇರುವನು.
Kannada Bible (KNCL) BSI 2016
ಹೀಗಿರಲಾಗಿ, ಒಬ್ಬನು ಕೀಳುತನದಿಂದ ತನ್ನನ್ನು ತಾನೇ ಶುದ್ಧೀಕರಿಸಿಕೊಂಡರೆ, ಅವನು ಉತ್ತಮ ಬಳಕೆಗೆ ಯೋಗ್ಯನಾಗುತ್ತಾನೆ. ಅಂಥವನು ದೇವರ ಸೇವೆಗೆ ಮೀಸಲಾಗುತ್ತಾನೆ. ಸತ್ಕಾರ್ಯಗಳನ್ನು ಕೈಗೊಳ್ಳಲು ಸಿದ್ಧನಾಗಿರುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬನು ತನ್ನನ್ನು ಸಾಮಾನ್ಯ ಘನಹೀನತೆಯಿಂದ ಶುದ್ಧಮಾಡಿಕೊಂಡರೆ, ಅವನು ವಿಶೇಷ ಉದ್ದೇಶಕ್ಕಾಗಿ ಶುದ್ಧೀಕರಗೊಂಡವನೂ ಯಜಮಾನನಿಗೆ ಉಪಯುಕ್ತನೂ ಸಕಲ ಸತ್ಕಾರ್ಯಕ್ಕೆ ಸಿದ್ಧನೂ ಆಗಿರುವ ಗೌರವದ ಪಾತ್ರೆಯಾಗಿರುವನು.