2 Timothy 2:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೈನಿಕನು ತನ್ನ ಸೈನ್ಯಾಧಿಕಾರಿಯನ್ನು ಮೆಚ್ಚಿಸಲು ಇಷ್ಟಪಡುತ್ತಾನೆ. ಆದ್ದರಿಂದ ಆ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದಂತೆ ಎಚ್ಚರಿಕೆಯಿಂದಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯುದ್ಧಕ್ಕೆ ಹೋಗುವ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ, ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವುದಕ್ಕಾಗಿ ಪ್ರಯಾಸ ಪಡುತ್ತಿರುವನಲ್ಲವೇ.
Kannada BSI Bible 2016
ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯುದ್ಧಕ್ಕೆ ಹೋಗುವ ಸೈನಿಕನು ಲೋಕ ವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸ ಪಡುತ್ತಿರುವನಲ್ಲವೇ.
Kannada Bible (KNCL) BSI 2016
ಯುದ್ಧಕ್ಕೆ ಹೋಗುವ ಯಾವ ಸೈನಿಕನೂ ಲೋಕವ್ಯವಹಾರಗಳಲ್ಲಿ ಸಿಕ್ಕಿಕೊಳ್ಳನು. ಏಕೆಂದರೆ, ತನ್ನನ್ನು ಸೈನ್ಯಕ್ಕೆ ಸೇರಿಸಿಕೊಂಡವನನ್ನು ಮೆಚ್ಚಿಸಲು ಅವನು ಪ್ರಯತ್ನಿಸುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡ ನಾಯಕನನ್ನು ಮೆಚ್ಚಿಸಬೇಕೆಂದು ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳಲಾರನು.