2 Timothy 2:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಓಟದ ಸ್ಪರ್ಧೆಯಲ್ಲಿ ಗೆಲ್ಲಬೇಕಾದರೆ, ಓಟಗಾರನು ಎಲ್ಲಾ ನಿಯಮಗಳನ್ನು ಪಾಲಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಯಾವನಾದರೂ ಸ್ಪರ್ಧೆಯಲ್ಲಿ ಎದುರಾಳಿಯೊಡನೆ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ ಅವನಿಗೆ ಜಯಮಾಲೆಯು ದೊರಕುವುದಿಲ್ಲ.
Kannada BSI Bible 2016
ಇದಲ್ಲದೆ ಯಾವನಾದರೂ ಪ್ರವೀಣತೆಗಾಗಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡ ದಿದ್ದರೆ ಅವನಿಗೆ ಕಿರೀಟ ದೊರೆಯುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಯಾವನಾದರೂ ರಂಗಸ್ಥಳದಲ್ಲಿ ಎದುರಾಳಿನೊಡನೆ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ ಅವನಿಗೆ ಜಯಮಾಲೆಯು ದೊರಕುವದಿಲ್ಲ.
Kannada Bible (KNCL) BSI 2016
ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟು ಅದರ ನಿಯಮಗಳನ್ನು ಪಾಲಿಸದಿದ್ದರೆ ಬಹುಮಾನ ಗಳಿಸಲು ಸಾಧ್ಯವಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯಾವನಾದರೂ ಆಟದ ಸ್ವರ್ಧೆಯಲ್ಲಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ, ಅವನು ಜಯಶಾಲಿಯ ಕಿರೀಟ ಹೊಂದುವುದಿಲ್ಲ.