2 Timothy 2:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಕ್ರಿಸ್ತನನ್ನು ನೆನಪು ಮಾಡಿಕೊ. ಆತನು ದಾವೀದನ ವಂಶದವನು. ಯೇಸು ಸತ್ತನಂತರ ಜೀವಂತವಾಗಿ ಮೇಲೆದ್ದು ಬಂದನು. ಈ ಸುವಾರ್ತೆಯನ್ನೇ ನಾನು ಜನರಿಗೆ ತಿಳಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೂ ದಾವೀದನ ವಂಶದವನೂ ಆಗಿರುವ ಯೇಸು ಕ್ರಿಸ್ತನನ್ನು ಜ್ಞಾಪಕಮಾಡಿಕೋ, ಇದೇ ನಾನು ಸಾರುವ ಸುವಾರ್ತೆ.
Kannada BSI Bible 2016
ನನ್ನ ಸುವಾರ್ತೆಗನು ಸಾರವಾಗಿ ದಾವೀದನ ವಂಶದವನಾಗಿರುವ ಯೇಸು ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೆಂದು ಜ್ಞಾಪಕ ಮಾಡಿಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೂ ದಾವೀದನ ವಂಶದವನೂ ಆಗಿರುವ ಯೇಸು ಕ್ರಿಸ್ತನನ್ನು ಜ್ಞಾಪಕಮಾಡಿಕೋ; ಇದೇ ನಾನು ಸಾರುವ ಸುವಾರ್ತೆ.
Kannada Bible (KNCL) BSI 2016
ಕ್ರಿಸ್ತಯೇಸುವನ್ನು ಸ್ಮರಿಸಿಕೋ. ದಾವೀದನ ವಂಶಸ್ಥರಾದ ಅವರು ಮೃತರಾಗಿ ಪುನರುತ್ಥಾನರಾದರು. ಇದೇ ನಾನು ಸಾರುವ ಶುಭಸಂದೇಶ. ಇದನ್ನು ಸಾರಿದ್ದರಿಂದಲೇ ನಾನು ಕಷ್ಟಗಳಿಗೆ ಈಡಾಗಿದ್ದೇನೆ; ಪಾತಕಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯವನ್ನು ಯಾರೂ ಬಂಧಿಸುವಂತಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಸುವಾರ್ತೆಯ ಸಾರೋಣಕ್ಕೆ ಅನುಸಾರವಾಗಿ ದಾವೀದನ ವಂಶದವರಾದ ಯೇಸು ಕ್ರಿಸ್ತರು ಸತ್ತವರೊಳಗಿಂದ ಎಬ್ಬಿಸಲಾದರೆಂದು ಜ್ಞಾಪಕಮಾಡಿಕೋ.