2 Timothy 3:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನಗೆ ಸಂಭವಿಸಿದ ಹಿಂಸೆ ಮತ್ತು ಸಂಕಟಗಳ ಬಗ್ಗೆಯೂ ನಿನಗೆ ತಿಳಿದಿದೆ. ಅಂತಿಯೋಕ್ಯ, ಇಕೋನ್ಯ, ಲುಸ್ತ್ರಗಳಲ್ಲಿ ನನಗೆ ಸಂಭವಿಸಿದ ಸಂಗತಿಗಳೆಲ್ಲವೂ ನಿನಗೆ ತಿಳಿದಿವೆ. ನಾನು ಆ ಸ್ಥಳಗಳಲ್ಲಿ ಅನುಭವಿಸಿದ ಹಿಂಸೆಯು ನಿನಗೆ ತಿಳಿದಿದೆ. ಆದರೆ ಆ ಎಲ್ಲ ತೊಂದರೆಗಳಿಂದ ಪ್ರಭುವು ನನ್ನನ್ನು ಕಾಪಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ, ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು, ಅವೆಲ್ಲವುಗಳೊಳಗಿನಿಂದ ಕರ್ತನು ನನ್ನನ್ನು ಬಿಡಿಸಿದನು.
Kannada BSI Bible 2016
ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು; ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.
Kannada Bible (KNCL) BSI 2016
ನಾನು ಅನುಭವಿಸಿದ ಹಿಂಸೆನೋವುಗಳ ಮತ್ತು ಕಷ್ಟದುಃಖಗಳ ಕುರಿತು ಕೇಳಿರುವೆ. ಅಂತಿಯೋಕ್ಯ, ಇಕೋನಿಯ ಮತ್ತು ಲುಸ್ತ್ರ ಪಟ್ಟಣಗಳಲ್ಲಿ ನಾನು ಎಂಥ ಕ್ರೂರವಾದ ಹಿಂಸೆ ಅನುಭವಿಸಿದೆನೆಂಬುದು ನಿನಗೆ ತಿಳಿಯದ ವಿಷಯವೇನೂ ಅಲ್ಲ. ಆದರೆ ಪ್ರಭು ನನ್ನನ್ನು ಇವೆಲ್ಲವುಗಳಿಂದ ಪಾರುಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಎಂತೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬುದನ್ನೂ ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಕಷ್ಟಾನುಭವಗಳನ್ನೂ ನನಗುಂಟಾದ ಎಲ್ಲಾ ಹಿಂಸೆಗಳನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಕರ್ತದೇವರು ನನ್ನನ್ನು ಇವೆಲ್ಲವುಗಳಿಂದ ಬಿಡಿಸಿದರು.