2 Timothy 3:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀನು ಕಲಿತಿರುವ ಉಪದೇಶಗಳನ್ನು ಅನುಸರಿಸು. ಅವು ಸತ್ಯವೆಂಬುದು ನಿನಗೆ ತಿಳಿದಿದೆ. ಅವುಗಳನ್ನು ನಿನಗೆ ಕಲಿಸಿದ ಜನರು ನಂಬಿಕೆಗೆ ಯೋಗ್ಯರೆಂಬುದು ನಿನಗೆ ತಿಳಿದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನಾದರೋ ಕಲಿತು ದೃಢವಾಗಿ ನಂಬಿದ ಬೋಧನೆಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬುದನ್ನು ಆಲೋಚಿಸು.
Kannada BSI Bible 2016
ನೀನಾದರೋ ಕಲಿತು ದೃಢವಾಗಿ ನಂಬಿದವುಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬದನ್ನು ಆಲೋಚಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನಾದರೋ ಕಲಿತು ದೃಢವಾಗಿ ನಂಬಿದ ಬೋಧನೆಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬದನ್ನು ಆಲೋಚಿಸು. ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಯಿತಲ್ಲಾ.
Kannada Bible (KNCL) BSI 2016
ನೀನಾದರೋ ನಿನಗೆ ಬೋಧಿಸಲಾಗಿರುವ ಹಾಗೂ ನೀನು ದೃಢವಾಗಿ ನಂಬಿರುವ ಸತ್ಯಗಳನ್ನು ಅನುಸರಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನಾದರೋ, ಕಲಿತು ನಿಶ್ಚಯಗೊಂಡವುಗಳಲ್ಲಿ ಮುಂದುವರಿಯುತ್ತಿರು. ನಿನಗೆ ಕಲಿಸಿಕೊಟ್ಟವರು ಯಾರೆಂಬುದು ನಿನಗೆ ತಿಳಿದಿದೆ.