2 Timothy 3:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚಿಕ್ಕಂದಿನಿಂದಲೂ ನಿನಗೆ ಪವಿತ್ರ ಗ್ರಂಥದ ಪರಿಚಯವಿದೆ. ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಆ ಪವಿತ್ರ ಗ್ರಂಥವು ಶಕ್ತವಾಗಿದೆ. ಕ್ರಿಸ್ತ ಯೇಸುವಿನಲ್ಲಿನ ನಂಬಿಕೆಯ ಮೂಲಕ ಆ ಜ್ಞಾನವು ರಕ್ಷಣೆಯ ಕಡೆಗೆ ನಡೆಸುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.
Kannada BSI Bible 2016
ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಗ್ರಂಥಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.
Kannada Bible (KNCL) BSI 2016
ನಿನ್ನ ಬೋಧಕರು ಯಾರೆಂಬುದು ನಿನಗೆ ಗೊತ್ತಿದೆ. ಚಿಕ್ಕಂದಿನಿಂದಲೇ ನೀನು ಪವಿತ್ರಗ್ರಂಥವನ್ನು ಪರಿಚಯಮಾಡಿಕೊಂಡಿರುವೆ. ಯೇಸುಕ್ರಿಸ್ತರನ್ನು ವಿಶ್ವಾಸಿಸುವುದರ ಮೂಲಕ ಜೀವೋದ್ಧಾರವನ್ನು ಪಡೆಯಬಹುದೆಂಬ ಜ್ಞಾನವು ಲಭಿಸುವುದು ಆ ಪವಿತ್ರಗ್ರಂಥದಿಂದಲೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸದ ಮೂಲಕ ರಕ್ಷಣೆ ಹೊಂದುವಂತೆ ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಶಕ್ತವಾಗಿರುವ ಪವಿತ್ರ ವೇದಗಳನ್ನು ನೀನು ಚಿಕ್ಕಂದಿನಿಂದಲೂ ತಿಳಿದವನಾಗಿದ್ದೀಯಲ್ಲಾ.