2 Timothy 3:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೊನೆಯ ದಿನಗಳಲ್ಲಿ ಜನರು ಮಿತ್ರದ್ರೋಹಿಗಳಾಗಿರುತ್ತಾರೆ; ದುಡುಕಿ ಮೂರ್ಖ ಕೆಲಸಗಳನ್ನು ಮಾಡುವವರಾಗಿರುತ್ತಾರೆ; ಜಂಬದಿಂದ ಉಬ್ಬಿಕೊಂಡವರಾಗಿರುತ್ತಾರೆ; ದೇವರನ್ನು ಪ್ರೀತಿಸದೆ ವಿಲಾಸಪ್ರಿಯರಾಗಿರುತ್ತಾರೆ;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದ್ರೋಹಿಗಳೂ, ದುಡುಕುವವರೂ, ದುರಹಂಕಾರವುಳ್ಳವರೂ, ದೇವರನ್ನು ಪ್ರೀತಿಸುವುದಕ್ಕಿಂತ ಅಧಿಕವಾಗಿ ಭೋಗವನ್ನೇ ಪ್ರೀತಿಸುವವರೂ,
Kannada BSI Bible 2016
ದ್ರೋಹಿಗಳೂ ದುಡಿಕಿನವರೂ ಉಬ್ಬಿಕೊಂಡವರೂ ದೇವರಿಗಿಂತ ಹೆಚ್ಚಾಗಿ ಭೋಗಗಳನ್ನೇ ಪ್ರೀತಿಸುವವರೂ
Kannada BSI JV (ಕನ್ನಡ ಸತ್ಯವೇದವು J.V. (BSI))
ದ್ರೋಹಿಗಳೂ ದುಡುಕಿನವರೂ ಉಬ್ಬಿಕೊಂಡವರೂ ದೇವರನ್ನು ಪ್ರೀತಿಸದೆ ಭೋಗಗಳನ್ನೇ ಪ್ರೀತಿಸುವವರೂ
Kannada Bible (KNCL) BSI 2016
ನಂಬಿಕೆದ್ರೋಹಿಗಳೂ ದುಡುಕುವವರೂ ಮಹಾಗರ್ವಿಗಳೂ ಆಗುವರು. ದೇವರನ್ನು ಅರಸದೆ ಭೋಗಗಳನ್ನೇ ಬಯಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದ್ರೋಹಿಗಳೂ ದುಡುಕುವವರೂ ಉಬ್ಬಿಕೊಂಡವರೂ ದೇವರನ್ನು ಪ್ರೀತಿಸುವುದಕ್ಕಿಂತಲೂ ಭೋಗಗಳನ್ನೇ ಪ್ರೀತಿಸುವವರೂ