2 Timothy 3:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯನ್ನ ಮತ್ತು ಯಂಬ್ರರನ್ನು ನೆನಪುಮಾಡಿಕೊ. ಅವರು ಮೋಶೆಯನ್ನು ವಿರೋಧಿಸಿದರು. ಈ ಜನರೂ ಅವರಂತೆಯೇ. ಅವರು ಸತ್ಯವನ್ನು ವಿರೋಧಿಸುತ್ತಾರೆ. ಆ ಜನರ ಆಲೋಚನೆಗಳೆಲ್ಲ ಗಲಿಬಿಲಿಗೊಂಡಿವೆ. ಅವರು ನಂಬಿಕೆಯನ್ನು ಅನುಸರಿಸುವ ತಮ್ಮ ಪ್ರಯತ್ನದಲ್ಲಿ ಸೋತುಹೋಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಈ ಮನುಷ್ಯರು ಸಹ ಸತ್ಯಕ್ಕೆ ವಿರೋಧಿಗಳಾಗಿದ್ದು, ಬುದ್ಧಿಹೀನರೂ ನಂಬಿಕೆಯ ವಿಷಯದಲ್ಲಿ ನಿಷ್ಪ್ರಯೋಜಕರೂ ಆಗಿದ್ದಾರೆ.
Kannada BSI Bible 2016
ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯನ್ನ ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಆ ಮನುಷ್ಯರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಬುದ್ಧಿಗೆಟ್ಟವರೂ ಕ್ರಿಸ್ತ ನಂಬಿಕೆಯಿಂದ ಭ್ರಷ್ಟರೂ ಆಗಿದ್ದಾರೆ.
Kannada Bible (KNCL) BSI 2016
ಯನ್ನ ಮತ್ತು ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆ, ಇವರು ಸತ್ಯವನ್ನು ಪ್ರತಿಭಟಿಸುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ, ಈ ಸುಳ್ಳು ಬೋಧಕರು ಸಹ ಸತ್ಯವನ್ನು ವಿರೋಧಿಸುತ್ತಾರೆ. ಇದಲ್ಲದೆ ಇವರು ಬುದ್ಧಿಗೆಟ್ಟವರೂ ವಿಶ್ವಾಸದ ವಿಷಯದಲ್ಲಿ ಭ್ರಷ್ಠರೂ ಆಗಿ, ತಿರಸ್ಕಾರ ಹೊಂದಿರುತ್ತಾರೆ.