2 Timothy 4:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೊದಲ ಸಲ ನಾನು ನನ್ನನ್ನು ಸಮರ್ಥಿಸಿಕೊಂಡಾಗ ನನಗೆ ಯಾರೂ ಸಹಾಯಮಾಡಲಿಲ್ಲ. ಎಲ್ಲರೂ ನನ್ನನ್ನು ಬಿಟ್ಟುಹೋದರು. ದೇವರು ಅವರನ್ನು ಕ್ಷಮಿಸಲಿ ಎಂದು ಪ್ರಾರ್ಥಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.
Kannada BSI Bible 2016
ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಕಡೆ ಆಗಲಿಲ್ಲ; ಎಲ್ಲರೂ ನನ್ನನ್ನು ಕೈಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ.
Kannada Bible (KNCL) BSI 2016
ನಾನು ಮೊದಲನೆಯ ಸಾರಿ ವಿಚಾರಣೆಗೆ ಒಳಗಾಗಿ ಪ್ರತಿವಾದಿಸುತ್ತಿದ್ದಾಗ ಯಾರೂ ನನ್ನ ಪರವಾಗಿ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ದೇವರು ಅವರನ್ನು ಕ್ಷಮಿಸಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರ ಲೆಕ್ಕಕ್ಕೆ ಸೇರಿಸಲಾಗದೆ ಇರಲಿ.