2 Timothy 4:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾರಾದರೂ ನನಗೆ ತೊಂದರೆ ಮಾಡಲು ಪ್ರಯತ್ನಿಸಿದರೆ, ಪ್ರಭುವು ನನ್ನನ್ನು ರಕ್ಷಿಸುವನು. ಪ್ರಭುವು ನನ್ನನ್ನು ಸುರಕ್ಷಿತವಾಗಿ ತನ್ನ ಪರಲೋಕರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಪ್ರಭುವಿಗೆ ಮಹಿಮೆಯಾಗಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.
Kannada BSI Bible 2016
ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಯಾವ ದುಷ್ಕೃತ್ಯವನ್ನೂ ಮಾಡದಂತೆ ಕರ್ತನು ನನ್ನನ್ನು ಕಾಪಾಡಿ ತನ್ನ ಬಳಿಗೆ ಪರಲೋಕರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.
Kannada Bible (KNCL) BSI 2016
ಪ್ರಭು ನನ್ನನ್ನು ಸಕಲ ಕೇಡುಗಳಿಂದ ರಕ್ಷಿಸಿ, ತಮ್ಮ ಸ್ವರ್ಗಸಾಮ್ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ಸೇರಿಸುವರು. ಯುಗಯುಗಾಂತರಕ್ಕೂ ಅವರಿಗೆ ಮಹಿಮೆ ಸಲ್ಲಲಿ, ಆಮೆನ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನನ್ನು ಪ್ರತಿಯೊಂದು ದುಷ್ಟದಾಳಿಯಿಂದ ಕರ್ತ ಯೇಸು ತಪ್ಪಿಸಿ, ತಮ್ಮ ಪರಲೋಕ ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ತರುವರು. ಯುಗಯುಗಾಂತರಗಳಲ್ಲಿಯೂ ಅವರಿಗೆ ಮಹಿಮೆ. ಆಮೆನ್.